
ಅಡಕೆ ದಾಸ್ತಾನು ಗೋದಾಮುಗಳ ಮೇಲೆ ದಾಳಿ : ಭಾರೀ ಪ್ರಮಾಣದ ಅಕ್ರಮ ದಾಸ್ತಾನು ಪತ್ತೆ!
ಶಿವಮೊಗ್ಗ (shivamogga), ಮೇ 29: ಅಡಕೆ ವರ್ತಕರ ವ್ಯಾಪಾರ ಗೋದಾಮು ಸ್ಥಳಗಳ ಮೇಲೆ ದಿಢೀರ್ ದಾಳಿ (raid) ನಡೆಸಿ, ಲಕ್ಷಾಂತರ ಮೊತ್ತದ ಅಕ್ರಮ ಅಡಕೆ ವಹಿವಾಟು ದಾಸ್ತಾನು ಪತ್ತೆ ಹಚ್ಚಿ ದಂಡ ವಿಧಿಸಿದ ಘಟನೆ ನಡೆದಿದೆ.
ಶಿವಮೊಗ್ಗ ವಿಭಾಗೀಯ ವ್ಯಾಪ್ತಿಯ ಜಾರಿ ಮತ್ತು ಜಾಗೃತ ದಳ ಹಾಗೂ ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಸುಮಾರು 40 ಅಧಿಕಾರಿಗಳ ತಂಡ ಮಲೆನಾಡು ವಿಭಾಗ ವ್ಯಾಪ್ತಿಯ ಎಲ್ಲಅಡಕೆ ವರ್ತಕರ ವ್ಯಾಪಾರ ಗೋದಾಮು (arecanut stock warehouses) ಸ್ಥಳಗಳ ಮೇಲೆ ಈ ದಾಳಿ ನಡೆಸಿದೆ.
ಈ ವಿಶೇಷ ಕಾರ್ಯಾಚರಣೆಯ (special raid) ನೇತೃತ್ವವನ್ನು, ಶಿವಮೊಗ್ಗದ (shimoga) ಮಲೆನಾಡು ವಿಭಾಗೀಯ ತೆರಿಗೆ ಜಾಗೃತ ದಳ ಹಾಗೂ ಸರಕು ಮತ್ತು ಸೇವಾ ತೆರಿಗೆಗಳ ಜಂಟಿ ಆಯುಕ್ತರುಗಳು ಹಾಗೂ ಉಪ ಆಯುಕ್ತರುಗಳ ನೇತೃತ್ವದಲ್ಲಿ ನಡೆಸಲಾಗಿದೆ.
ಅಕ್ರಮವಾಗಿ (illegal) ಅಡಕೆ ಸಂಗ್ರಹಿಸಿದ ವ್ಯಾಪಾರಿಗಳ (merchants) ಮೇಲೆ ಜಿ.ಎಸ್ ಟಿ ಕಾಯ್ದೆ (gst act) ನಿಯಮಾನುಸಾರ ಕ್ರಮ ಜರುಗಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.