
ಶಿವಮೊಗ್ಗ ಲೋಕಸಭಾ ಕ್ಷೇತ್ರ : ಮತ ಎಣಿಕೆಗೆ ದಿನಗಣನೆ – ಸಕಲ ಸಿದ್ದತೆ!
ವರದಿ : ಬಿ. ರೇಣುಕೇಶ್
ಶಿವಮೊಗ್ಗ (shivamogga), ಮೇ 29: ಲೋಕಸಭೆ ಸಾರ್ವತ್ರಿಕ ಚುನಾವಣೆ (loksabha election 2024) ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ. ಶಿವಮೊಗ್ಗ ಕ್ಷೇತ್ರಕ್ಕೆ (shimoga constituency) ಸಂಬಂಧಿಸಿದಂತೆ, ಸಹ್ಯಾದ್ರಿ ಕಾಲೇಜ್ (sahyadri college) ಕಟ್ಟಡದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಈಗಾಗಲೇ ಜಿಲ್ಲಾಡಳಿತ ಸಕಲ ಪೂರ್ವಭಾವಿ ಸಿದ್ದತೆ ಮಾಡಿಕೊಂಡಿದೆ.
‘ಮತ ಎಣಿಕೆಗೆ (vote counting) ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಎರಡು ಕೊಠಡಿಗಳ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿ ಕೊಠಡಿಯಲ್ಲಿ 7 ಟೇಬಲ್ ಗಳನ್ನು ಹಾಕಲಾಗುತ್ತಿದೆ. ಪ್ರತಿ ಟೇಬಲ್ ಗೆ ಮೂವರು ಅಧಿಕಾರಿ – ಸಿಬ್ಬಂದಿಗಳ ನಿಯೋಜನೆ ಮಾಡಲಾಗುತ್ತಿದೆ. ಹಾಗೆಯೇ ಸೂಕ್ಷ್ಮ ವೀಕ್ಷಕರನ್ನು ನೇಮಿಸಲಾಗುತ್ತಿದೆ’ ಎಂದು ಅಪರ ಜಿಲ್ಲಾಧಿಕಾರಿ (shimoga adc) ಸಿದ್ದಲಿಂಗರೆಡ್ಡಿ ತಿಳಿಸಿದ್ದಾರೆ.
ಬುಧವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ (mobile phone) ಬಳಕೆ ಸಂಪೂರ್ಣ ನಿರ್ಬಂಧಿಸಲಾಗಿದೆ. ಬಿಗಿ ಪೊಲೀಸ್ ಪಹರೆಯ (Tight police guard) ವ್ಯವಸ್ಥೆ ಮಾಡಲಾಗುತ್ತಿದೆ. ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಅಸೆಂಬ್ಲಿ ಕ್ಷೇತ್ರಗಳ ಬೂತ್ ಗಳ ಸಂಖ್ಯೆಗೆ ಅನುಗುಣವಾಗಿ ಮತ ಎಣಿಕೆಯ ರೌಂಡ್ಸ್ ಗಳು ನಿರ್ಧಾರವಾಗಲಿದೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಗಳ ಸಂಖ್ಯೆ ಹೆಚ್ಚಿರುವುದರಿಂದ, 21 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕುತೂಹಲ : ಶಿವಮೊಗ್ಗ ಕ್ಷೇತ್ರವು ಹೈವೋಲ್ಟೇಜ್ ಹಣಾಹಣಿಗೆ ಸಾಕ್ಷಿಯಾಗಿತ್ತು. ಫಲಿತಾಂಶ ಯಾರ ಪರವಾಗಿರಲಿದೆ ಎಂಬ ಕುತೂಹಲ ಮೂಡಿಸಿದೆ. ಪ್ರಸ್ತುತ ಚುನಾವಣೆಯಲ್ಲಿ ಒಟ್ಟಾರೆ 23 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಪ್ರಮುಖವಾಗಿ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ (bjp b y raghavendra), ಕಾಂಗ್ರೆಸ್ ನಿಂದ ಗೀತಾ ಶಿವರಾಜಕುಮಾರ್ (congress geetha shivarajakumar) ಹಾಗೂ ಪಕ್ಷೇತರವಾಗಿ ಕಣಕ್ಕಿಳಿದಿದ್ದ ಕೆ.ಎಸ್.ಈಶ್ವರಪ್ಪ (k s eshwarappa) ನಡುವೆ ಭಾರೀ ಪೈಪೋಟಿ ಕಂಡುಬಂದಿತ್ತು.
ಕಳೆದ ಚುನಾವಣೆಗೆ ಹೋಲಿಸಿದರೆ, ಪ್ರಸ್ತುತ ಎಲೆಕ್ಷನ್ ನಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾನವಾಗಿದೆ. ಹೆಚ್ಚಿನ ಮತದಾನವು ಯಾರಿಗೆ ವರವಾಗಲಿದೆ, ಹೊರೆಯಾಗಲಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ನಡೆಯುತ್ತಿವೆ.
2014 ಹಾಗೂ 2019 ರ ಚುನಾವಣೆಗಳಿಗೆ ಹೋಲಿಸಿದರೆ, ಪ್ರಸ್ತುತ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾನವಾಗಿದೆ. 13,72,949 (ಶೇ. 78. 33) ಜನರು ಮತದಾನ ಮಾಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿರುವುದರಿಂದ, ಯಾರಿಗೆ ವರವಾಗಲಿದೆ? ಹೊರೆಯಾಗಲಿದೆ? ಎಂಬ ಕುತೂಹಲವೂ ಮೂಡಿಸಿದೆ.
ಮೊಬೈಲ್ ಫೋನ್ ನಿರ್ಬಂಧ : ಎಡಿಸಿ ಸಿದ್ದಲಿಂಗರೆಡ್ಡಿ

*** ‘ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ. ‘ಮತ ಎಣಿಕೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಎರಡು ಕೊಠಡಿಗಳ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿ ಕೊಠಡಿಯಲ್ಲಿ 7 ಟೇಬಲ್ ಗಳನ್ನು ಹಾಕಲಾಗುತ್ತಿದೆ. ಪ್ರತಿ ಟೇಬಲ್ ಗೆ ಮೂವರು ಅಧಿಕಾರಿ – ಸಿಬ್ಬಂದಿಗಳ ನಿಯೋಜನೆ ಮಾಡಲಾಗುತ್ತಿದೆ’ ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ (adc siddalinga reddy) ಅವರು ಬುಧವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಮತ ಎಣಿಕೆ : ವಾಹನಗಳ ಮಾರ್ಗ ಬದಲಾವಣೆ
ಶಿವಮೊಗ್ಗ, ಮೇ 29 : ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಜೂನ್ 04 ರಂದು ಶಿವಮೊಗ್ಗ ಲೋಕ ಸಭಾ ಕ್ಷೇತ್ರದ (shimoga loksahba constituency) ಮತ ಎಣಿಕೆ ಕಾರ್ಯವು ನಡೆಯಲಿರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಹಾಗೂ ವಾಹನಗಳ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಗುರದತ್ತ ಹೆಗಡೆ (shimoga dc gurudatta hegade) ಆದೇಶಿಸಿದ್ದಾರೆ.
ಸಹ್ಯಾದ್ರಿ ಕಾಲೇಜಿನ (sahyadri college) ಸುತ್ತಮುತ್ತ 100 ಮೀ. ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇದಿಸಲಾಗಿದೆ. ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್‍ಗಳು ಹಾಗೂ ಕಾರು ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮೂಲಕ ಸಂಚರಿಸುವುದು. ಚಿತ್ರದುರ್ಗ, ಹೊಳೆಹೊನ್ನೂರು ಕಡೆಯಿಂದ ಬಂದು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್‍ಗಳು ಬಿ.ಹೆಚ್.ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣಕ್ಕೆ ಹೋಗುವುದು. ಹೊನ್ನಾಳಿ ದಾವಣಗೆರೆಯಿಂದ ಬರುವ ಎಲ್ಲಾ ಭಾರಿ ವಾಹನ, ಎಲ್ಲಾ ಬಸ್‍ಗಳನ್ನು 100 ಅಡಿರಸ್ತೆ, ವಿನೋಬನಗರ ಮಾರ್ಗವಾಗಿ ಹೋಗುವುದು. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್‍ಗಳು ಎ. ಎ. ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮುಖಾಂತರವಾಗಿ ಹೋಗುವುದು. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್. ಸರ್ಕಲ್ ಕಡೆಗೆ ಹೋಗುವುದು. ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಅಂಬ್ಯುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿದೆ.
ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳ ನಿಲುಗಡೆ ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು ಮತ್ತು ವಜ್ರ ಮಹೋತ್ಸವ ಕಟ್ಟಡದ ಎದುರು ಮತ್ತು ಬಿ.ಹೆಚ್.ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ವಾಹನ ಪಾರ್ಕಿಂಗ್‍ಗೆ ಅನುಮತಿಸಿದೆ. ಎಂ.ಆರ್.ಎಸ್. ಸರ್ಕಲ್‍ನ ಹತ್ತಿರವಿರುವ ಕೆ.ಇ.ಬಿ ಸಮುದಾಯ ಭವನದ ಹಿಂಭಾಗ ವಾಹನಗಳ ಪಾರ್ಕಿಂಗ್‍ಗೆ ಅನುಮತಿ ನೀಡಿದೆ. ಸಾರ್ವಜನಿಕರ ಕಾರು ಮತ್ತು ದ್ವಿಚಕ್ರ ವಾಹನಗಳ ನಿಲುಗಡೆ ಎಂಆರ್.ಎಸ್. ನಿಂದ ಎನ್.ಆರ್.ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ ಮಾಡುವುದು. ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ವೇಡಿಯಂ ಹತ್ತಿರ ಸಾರ್ವಜನಿಕರ ಎಲ್ಲಾ ವಾಹನಗಳ ಪಾರ್ಕಿಂಗ್‍ಗೆ ಅನುಮತಿ ನೀಡಿದೆ. ಎಂ.ಆರ್.ಎಸ್. ಸರ್ಕಲ್‍ನಿಂದ ಬಿ.ಹೆಚ್.ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್‍ವರೆಗೆ ಸಾರ್ವಜನಿಕರ ವಾಹನಗಳು ಒಡಾಡದಂತೆ ನಿಷೇದಿಸಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿದೆ.