Lok Sabha Election Vote Counting : Prohibition is enforced from june 4 to 5! ಲೋಕಸಭೆ ಚುನಾವಣೆ ಮತ ಎಣಿಕೆ : ಜೂ. 4 ರಿಂದ 5 ರವರೆಗೆ ನಿಷೇಧಾಜ್ಞೆ ಜಾರಿ!

ಲೋಕಸಭೆ ಚುನಾವಣೆ ಮತ ಎಣಿಕೆ : ಜೂ. 4 ರಿಂದ 5 ರವರೆಗೆ ನಿಷೇಧಾಜ್ಞೆ ಜಾರಿ!

ಶಿವಮೊಗ್ಗ (shivamogga), ಮೇ 30: ಜಿಲ್ಲೆಯಲ್ಲಿ ಮೇ 07 ರಂದು ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ (loksabha election 2024) ಮತ ಎಣಿಕೆಯು (vote counting) ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದ್ದು, ಶಾಂತಿ ಹಾಗೂ ಕಾನೂನು-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಜೂನ್ 4 ರ ಬೆಳಿಗ್ಗೆ6 ರಿಂದ ಜೂನ್ 5 ರ ಬೆಳಗ್ಗೆ 6.00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ (shimoga dc) ಗುರುದತ್ತ ಹೆಗಡೆ  ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ. ಯಾವುದೇ ಮೆರವಣಿಗೆ (Procession), ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ.

ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕವಸ್ತು ಒಯ್ಯತಕ್ಕುದ್ದಲ್ಲ ಎಂದು  ಆದೇಶದಲ್ಲಿ ತಿಳಿಸಿದ್ದಾರೆ.

ಕಲ್ಲು ಅಥವಾ ಎಸೆಯುವ ವಸ್ತುಗಳ ಅಥವಾ ವಸ್ತುಗಳನ್ನು ಅಥವಾ ಚಲಿಸುವ ಅಸ್ತ್ರಗಳನ್ನು ಸಂಗ್ರಹಿಸುವುದನ್ನು, ತಯಾರಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಪೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ.

ಮತ್ತು ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಅಣುಕು ಶವಗಳ ಪ್ರದರ್ಶನ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ. 

ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡುಗುವುದನ್ನು ನಿಷೇಧಿಸಲಾಗಿದೆ. ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾ.ದಂ.ಸಂ.ಕಲಂ 188 ರನ್ವಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಈ ನಿಷೇಧಾಜ್ಞೆಯು ಸದುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರುಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

Shimoga Lok Sabha Constituency : Days Counting for Vote Counting - All Ready! ಶಿವಮೊಗ್ಗ ಲೋಕಸಭಾ ಕ್ಷೇತ್ರ : ಮತ ಎಣಿಕೆಗೆ ದಿನಗಣನೆ - ಸಕಲ ಸಿದ್ದತೆ! ವರದಿ : ಬಿ. ರೇಣುಕೇಶ್ – b renukesha Previous post ಶಿವಮೊಗ್ಗ ಲೋಕಸಭಾ ಕ್ಷೇತ್ರ : ಮತ ಎಣಿಕೆಗೆ ದಿನಗಣನೆ – ಸಕಲ ಸಿದ್ದತೆ!
Strict action against the accused: Shimoga SP ಆರೋಪಿಗಳ ವಿರುದ್ದ ಕಠಿಣ ಕ್ರಮ : ಶಿವಮೊಗ್ಗ ಎಸ್ಪಿ Next post ಆರೋಪಿಗಳ ವಿರುದ್ದ ಕಠಿಣ ಕ್ರಮ : ಶಿವಮೊಗ್ಗ ಎಸ್ಪಿ