ಪಾಲಿಕೆ ಆಡಳಿತದ ವಿರುದ್ಧ ನಾಳೆ ರಸ್ತೆ ತಡೆ ಪ್ರತಿಭಟನೆ

ಶಿವಮೊಗ್ಗ, ಫೆ. 24: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ1 ನೇ ವಾರ್ಡ್ ಸೋಮಿನಕೊಪ್ಪ ಬಡಾವಣೆಯಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ಮಹಾನಗರ ಪಾಲಿಕೆ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ, ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದಂತೆ ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಫೆ.25 ರಂದು ಸೋಮಿನಕೊಪ್ಪ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಎಎಪಿ ಮುಖಂಡ ಮಕ್ಬುಲ್ ಅಹಮದ್ ಅವರು ಶುಕ್ರವಾರ ಈ ವಿಷಯ ತಿಳಿಸಿದ್ದಾರೆ. ಸೋಮಿನಕೊಪ್ಪ ಬಡಾವಣೆಯ ಹಲವು ಪ್ರದೇಶಗಳಲ್ಲಿ ಇಲ್ಲಿಯವರೆಗೂ ಚರಂಡಿ – ರಸ್ತೆಯಂತಹ ಕನಿಷ್ಠ ಮೂಲಸೌಕರ್ಯಗಳ ವ್ಯವಸ್ಥೆಯಿಲ್ಲ. 

ಸೌಲಭ್ಯಕ್ಕೆ ಆಗ್ರಹಿಸಿ ಪಾಲಿಕೆ ಆಡಳಿತಕ್ಕೆ ಮನವಿ ಮಾಡುತ್ತಾ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಂಪೂರ್ಣ ನಿರ್ಲಕ್ಷ ವಹಿಸಿದೆ ಎಂದು ಆರೋಪಿಸಿದ್ದಾರೆ. 

ಮಹಾನಗರ ಪಾಲಿಕೆ ಆಡಳಿತದ ನಿರ್ಲಕ್ಷ ಖಂಡಿಸಿ ರಸ್ತೆ ತಡೆ ನಡೆಸಲಾಗುತ್ತಿದೆ ಎಂದು ಮಕ್ಬುಲ್ ಅಹಮದ್ ಅವರು ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಎಪಿ ಪಕ್ಷದ ಜಿಲ್ಲಾಧ್ಯಕ್ಷರಾದ ಕಿರಣ್, ಮುಖಂಡರಾದ ಸುರೇಶ್ ಕೌಟೇಕರ್, ನಜೀರ್ ಅಹ್ಮದ್, ಶಿವಕುಮಾರ್ ಗೌಡ, ಕಲಂದರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Previous post ಶಿವಮೊಗ್ಗ ನಾಗರೀಕರೇ ಗಮನಿಸಿ..! : ಫೆ. 27 ರಂದು ನಗರ ಸಂಚಾರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ!!
Next post ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ : ಡಿಸಿ ಡಾ.ಆರ್.ಸೆಲ್ವಮಣಿ – ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಾಹಿತಿ