
ಮತಗಳಿಕೆಯಲ್ಲಿ ಬಿ.ವೈ.ರಾಘವೇಂದ್ರಗೆ ಮತ್ತಷ್ಟು ಮುನ್ನಡೆ!
ಪೈಪೋಟಿ ನೀಡುತ್ತಿರುವ ಗೀತಾ ಶಿವರಾಜಕುಮಾರ್
ಕೆ.ಎಸ್.ಈಶ್ವರಪ್ಪಗೆ ಭಾರೀ ಹಿನ್ನಡೆ!!
ಶಿವಮೊಗ್ಗ (shivamogga), ಜೂ. 4: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತ ಗಳಿಕೆಗೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಕಂಡುಬರುತ್ತಿದೆ.
ಆದರೆ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು ಮತ ಗಳಿಕೆಯಲ್ಲಿ ನಿರಂತರವಾಗಿ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ.
ಬೆಳಿಗ್ಗೆ 9.56 ರ ಮಾಹಿತಿಯಂತೆ ಬಿ.ವೈ.ರಾಘವೇಂದ್ರ 1,33,384 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ 1,00,199 ಮತ ಗಳಿಸಿದ್ದಾರೆ. ಬಿ.ವೈ.ರಾಘವೇಂದ್ರ ಅವರು 33,185 ಮತಗಳ ಲೀಡ್ ನಲ್ಲಿದ್ದಾರೆ.
ಉಳಿದಂತೆ ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಅವರಿಗೆ 5358 ಮತಗಳು ಸಂದಾಯವಾಗಿವೆ. ಮತ ಎಣಿಕೆ ಮುಂದುವರೆದಿದೆ.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...