
ಕರ್ನಾಟಕ ಬಿಜೆಪಿ – 16, ಕಾಂಗ್ರೆಸ್ – 10, ಜೆಡಿಎಸ್ – 2 ಗೆ ಮುನ್ನಡೆ
ಬೆಂಗಳೂರು, ಜೂ. 4: ಲೋಕಸಭೆ ಸಾರ್ವತ್ರಿಕ ಚುನಾವಣೆ – 2024 ರ ಮತ ಎಣಿಕೆ ಮುಂದುವರಿದಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ 16, ಕಾಂಗ್ರೆಸ್ 10 ಹಾಗೂ ಜೆಡಿಎಸ್ ಪಕ್ಷ 2 ರಲ್ಲಿ ಮುನ್ನಡೆ ಸಾಧಿಸಿದೆ.
ಬಿಜೆಪಿ ಪಕ್ಷವು ಬೆಳಗಾಂ, ಬಾಗಲಕೋಟೆ, ಬಿಜಾಪುರ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ – ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮೈಸೂರು, ಬೆಂಗಳೂರು ಗ್ರಾಮೀಣ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಕಾಂಗ್ರೆಸ್ ಪಕ್ಷವು ಚಿಕ್ಕೋಡಿ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಹಾಸನ, ಚಾಮರಾಜನಗರ ಹಾಗೂ ಬೆಂಗಳೂರು ಸೆಂಟ್ರಲ್ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಉಳಿದಂತೆ ಜೆಡಿಎಸ್ ಪಕ್ಷವು ಮಂಡ್ಯ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತ ಎಣಿಕೆ ಮುಂದುವರಿದಿದೆ. ಅಧಿಕೃತ ಫಲಿತಾಂಶ ಇನ್ನಷ್ಟೆ ಪ್ರಕಟವಾಗಬೇಕಾಗಿದೆ.
More Stories
ಶಿವಮೊಗ್ಗದಲ್ಲಿ ಮ್ಯಾರಥಾನ್ ಓಟ ಆಯೋಜನೆ
ಶಿವಮೊಗ್ಗ, ಆ. 14: ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ನೆಹರೂ ಕ್ರೀಡಾಂಗಣದಿಂದ ಇಂದು ಮ್ಯಾರಥಾನ್ ಓಟ ಏರ್ಪಡಿಸಲಾಗಿತ್ತು. ಯುವಸಬಲೀಕರಣ...