ಫೆ.26, 27 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ!

ಶಿವಮೊಗ್ಗ, ಫೆ. 24: ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಸಮಾರಂಭಕ್ಕೆ, ನಾಗರೀಕರನ್ನು ಕರೆತರಲು ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯ 200 ಬಸ್ ಗಳ ನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಸಾಂದರ್ಭಿಕ ಒಪ್ಪಂದದ ಆಧಾರದ ಮೇಲೆ ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ವಿಭಾಗದಿಂದ ನೂರಾರು ಬಸ್ ಗಳನ್ನು ಬಾಡಿಗೆ ಪಡೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಫೆ. 26 ಹಾಗೂ 27 ರಂದು ಜಿಲ್ಲೆಯಾದ್ಯಂತ ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಸಂಚಾರ ಅಸ್ತವ್ಯಸ್ತವಾಗಲಿದೆ.
‘ಫೆ. 26 ರ ಮಧ್ಯಾಹ್ನದಿಂದ 27 ರವರೆಗೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು, ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸಹಕರಿಸುವಂತೆ’ ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Previous post ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ : ಡಿಸಿ ಡಾ.ಆರ್.ಸೆಲ್ವಮಣಿ – ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಾಹಿತಿ
Next post 👉 ಬೇಡಿಕೆ ಈಡೇರದಿದ್ದರೆ ಮಾರ್ಚ್ 1 ರಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ನಿಶ್ಚಿತ 👉 ಮುಖ್ಯಮಂತ್ರಿಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಖಡಕ್ ಎಚ್ಚರಿಕೆ!