CM Siddaramaiah supports petrol-diesel price hike ಪೆಟ್ರೋಲ್ - ಡೀಸೆಲ್ ದರ ಏರಿಕೆ ಸರ್ಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಪೆಟ್ರೋಲ್ – ಡೀಸೆಲ್ ದರ ಏರಿಕೆ ಸರ್ಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ವಿಜಯಪುರ (vijayapura), ಜೂನ್ 16: ಪೆಟ್ರೋಲ್ – ಡೀಸೆಲ್ ಮೇಲಿನ ಮಾರಾಟ ತೆರಿಗೆ ಏರಿಕೆಗೂ, ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು, ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ (cm siddaramaiah) ತಿಳಿಸಿದರು. 

ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ (petrol diesel price hike) ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (r ashok) ಅವರ ಸೇಡಿಗಾಗಿ ದರ ಏರಿಕೆ ಮಾಡಿದ್ದಾರೆ ಎಂಬ  ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ವಿಜಯಪುರದಲ್ಲಿ ನಾವು ಸೋತಿದ್ದೇವೆ.  ಕರ್ನಾಟಕದಲ್ಲಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ.

ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಕರ್ನಾಟಕದಲ್ಲಿ (karnataka) ಕಳೆದ ಚುನಾವಣೆಗೆ (;loksabha election) ಹೋಲಿಕೆ ಮಾಡಿದರೆ , ಈ ಬಾರಿ ಒಂಭತ್ತು ಸ್ಥಾನಗಳನ್ನು  ಗಳಿಸಿದ್ದೇವೆ. ಬಿಜೆಪಿ (bjp) ಕಳೆದ ಬಾರಿ 25 ಇದ್ದನ್ನು ಈ ಬಾರಿ 19 ಕ್ಕೆ ಇಳಿದಿದ್ದಾರೆ. ನಮಗೆ 13% ಮತ ಹಂಚಿಕೆಯಾಗಿದೆ. ನಾವು ಸೋತಿದ್ದೇವೆಯೇ ಎಂದು ಪ್ರಶ್ನಿಸಿದರು. ನಮ್ಮ ಲೆಕ್ಕಾಚಾರದ ಪ್ರಕಾರ, ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ ಅಷ್ಟೇ ಎಂದರು.

ಸೋತಿರುವುದು ಬಿಜೆಪಿ : ಚುನಾವಣೆಯಲ್ಲಿ (election)  ಸೋತಿರುವುದು ಬಿಜೆಪಿ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದು ಈ ಬಾರಿ 240 ಸ್ಥಾನಗಳನ್ನು ಪಡೆದು ಬಿಜೆಪಿ ಸೋತಿದೆ ಎಂದರು. ಕಳೆದ ಬಾರಿ 31% ಈ ಬಾರಿ 41% ಮತ ಹಂಚಿಕೆಯಾಗಿದೆ. 15 ಸ್ಥಾನ ಬರಬಹುದೆಂಬ ನಿರೀಕ್ಷೆಯಿತ್ತು. ನಾವು ಸೋತಿದ್ದೇವೆಯೇ ಎಂದರು. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ  ಕಡಿಮೆ ಮತ ಬಂದಿದೆ, ಮೋದಿ ಅಲೆ (narendra modi) ಕಡಿಮೆಯಾಗಿದೆ ಎಂದು ಟೀಕಿಸಿದರು.

ಬೆಲೆ ಕಡಿಮೆ ಇದೆ : ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ (election result) ಸಂಬಂಧವಿಲ್ಲ. 11.4.2021ರಂದು  ಪೆಟ್ರೋಲ್ (petrol) ಮೇಲೆ 35% ತೆರಿಗೆ (tax) ಹಾಗೂ ಡೀಸೆಲ್ ಮೇಲೆ 24% ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು. ಡೀಸಲ್ (diesel) ಮೇಲೆ  14.34ಕ್ಕೆ ಇಳಿಸಿದರು. ಶೇ 7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ  ಕೇರಳ (kerala) ಆಗಲಿ, ಮಹಾರಾಷ್ಟ್ರ (maharastra), ತೆಲಂಗಾಣ (telangana), ಆಂಧ್ರ (andhra),ತಮಿಳುನಾಡು (tamilnadu) ಕಡಿಮೆ ಮಾಡಲಿಲ್ಲ. ಈಗ ಕರ್ನಾಟಕದಲ್ಲಿ 99.85 ರೂ ಪೆಟ್ರೋಲ್ ಬೆಲೆಯಿದೆ.

ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ.  102 ರೂ ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ 106.66 ರೂ.ಗಳಿದೆ. ಆಂಧ್ರದ ಅನಂತಪುರದಲ್ಲಿ 109.44 , ತೆಲಂಗಾಣದ ಹೈದರಾಬಾದ್ ನಲ್ಲಿ 107.40 ಹಾಗೂ ಮಹಾರಾಷ್ಟ್ರದಲ್ಲಿ 104.46 ರೂ.ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮ ದರ  ಕಡಿಮೆ ಇದೆ ಎಂದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು (h d kumaraswamy) ಕರ್ನಾಟಕದ ಇತಿಹಾಸದಲ್ಲಿ ಪೆಟ್ರೋಲ್ ಬೆಲೆ ಇಷ್ಟು ದುಬಾರಿಯಾಗಿರಲಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, ಕುಮಾರಸ್ವಾಮಿ ಹಿಂದೆ ಇದ್ದಾಗ ಶೇ 35% ಇತ್ತು. ಬಿಜೆಪಿ ಸರ್ಕಾರ ಇರುವ  ರಾಜಸ್ಥಾನದಲ್ಲಿ (rajasthan) 104.86 ರೂ.ಗಳಿದೆ ಹಾಗೂ ಮಧ್ಯಪ್ರದೇಶದಲ್ಲಿ (madhya pradesh) 106.47 ರೂ.ಗಳಿದೆ.

ಕರ್ನಾಟದಲ್ಲಿ ಈ ರಾಜ್ಯಗಳಿಗಿಂತ ಕಡಿಮೆ ಇದೆ. ಪಕ್ಕದ ರಾಜ್ಯಗಳಿಗೆ ಸಮವಾಹಿರಲಿ ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡಿರಲಿಲ್ಲ. ಚುನಾವಣೆಯ ನಂತರ ಬೆಲೆ ಬದ್ಧಗೊಳಿಸಲು ಏರಿಕೆ ಮಾಡಿದ್ದೇವೆ. ಇತರೆ  ರಾಜ್ಯಗಳಲ್ಲಿ ಬೆಲೆ ಇದಕ್ಕಿಂತ ಹೆಚ್ಚಿದೆ ಎಂದರು. 

ಗ್ಯಾರಂಟಿ (guarantee) ಯೋಜನೆಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಲಾಗಿದೆ. ಚುನಾವಣೆಗಾಗಿ ಅಲ್ಲ. ಸಾರ್ವಜನಿಕರಲ್ಲಿ ಗ್ಯಾರಂಟಿ ಗಳನ್ನು ನಿಲ್ಲಿಸುತ್ತಾರೆ ಎಂಬ ಗಾಳಿಸುದ್ದಿ ಹಬ್ಬಿಸಿರುವುದು ವಿಪಕ್ಷಗಳಾಗಿವೆ. ಗ್ಯಾರಂಟಿ ಕಾರ್ಯಕ್ರಮಗಳು ನಿಲ್ಲುವುದಿಲ್ಲವಾಗಿದೆ ಎಂದು ತಿಳಿಸಿದರು.

Modi Govt - 3.0 : Will MP B.Y. Raghavendra Chitta flow towards important projects in Shimoga? ಮೋದಿ ಸರ್ಕಾರ - 3.0 : ಶಿವಮೊಗ್ಗದ ಪ್ರಮುಖ ಯೋಜನೆಗಳತ್ತ ಹರಿಯುವುದೆ ಸಂಸದ ಬಿ.ವೈ.ರಾಘವೇಂದ್ರ ಚಿತ್ತ? ವರದಿ : ಬಿ. ರೇಣುಕೇಶ್ reporter : b.renukesha Previous post ಮೋದಿ ಸರ್ಕಾರ –  3.0 : ಶಿವಮೊಗ್ಗದ ಪ್ರಮುಖ ಯೋಜನೆಗಳತ್ತ ಹರಿಯುವುದೆ ಸಂಸದ ಬಿ.ವೈ.ರಾಘವೇಂದ್ರ ಚಿತ್ತ?
BJP leader died of heart attack while participating in the protest! ತೈಲ ಬೆಲೆ ಏರಿಕೆ ವಿರುದ್ದದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಬಿಜೆಪಿ ನಾಯಕ! Next post ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ಬಿಜೆಪಿ ನಾಯಕ!