ಕಪ್ಪು ಬಾವುಟ ಪ್ರದರ್ಶನ : ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಶಿವಮೊಗ್ಗ, ಫೆ. 27: ನಗರದ ಗೋಪಿ ವೃತ್ತದಲ್ಲಿ ದಿಢೀರ್ ಆಗಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲು ಮುಂದಾದ ನವ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದ ಘಟನೆ ಸೋಮವಾರ ಬೆಳಿಗ್ಗೆ ನಡೆಯಿತು.
ಹುಣಸೋಡು ಸ್ಫೋಟದ ವೇಳೆ ಮನೆ ಬಿರುಕು ಬಿಟ್ಟವರಿಗೆ ಇಲ್ಲಿಯವರೆಗೂ ಪರಿಹಾರ ನೀಡಿಲ್ಲ. ಸಂಪೂರ್ಣ ನಿರ್ಲಕ್ಷ್ಯವಹಿಸಲಾಗಿದೆ.
ಹಾಗೆಯೇ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ತಕ್ಷಣವೇ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರ ಗೋ.ರಮೇಶ್ ಗೌಡ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Previous post ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ : ಸಕಲ ಸಿದ್ಧತೆ!
Next post ಶಿವಮೊಗ್ಗ ನಗರದಲ್ಲಿ ಸಂಚಾರ ಅಸ್ತವ್ಯಸ್ತ : ಹಲವೆಡೆ ಟ್ರಾಫಿಕ್ ಜಾಮ್!!