
ಶಿವಮೊಗ್ಗ – ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಮೂವರು ಸಾವು – ಐವರಿಗೆ ಗಾಯ!
ಶಿವಮೊಗ್ಗ, ಜು. 6: ಎರಡು ಕಾರುಗಳ (car) ನಡುವೆ ಮುಖಾಮುಖಿ ಡಿಕ್ಕಿ (accident) ಸಂಭವಿಸಿ ಮೂವರು ಮೃತಪಟ್ಟು, ಐವರು ಗಾಯಗೊಂಡ ಘಟನೆ ಶಿವಮೊಗ್ಗ (shimoga) ನಗರದ ಹೊರವಲಯ ತ್ಯಾವರೆಕೊಪ್ಪ (tyavarekoppa) ಸಿಂಹಾಧಾಮ (lion safari) ಬಳಿಯ ಟ್ರೀ ಪಾರ್ಕ್ ಸಮೀಪದ ರಾಷ್ಟ್ರೀಯ ಹೆದ್ಧಾರಿಯಲ್ಲಿ (national highway) ಶನಿವಾರ ಬೆಳಿಗ್ಗೆ ನಡೆದಿದೆ.
ಮೃತಪಟ್ಟವರು ಹಾಗೂ ಗಾಯಗೊಂಡವರ ಬಗ್ಗೆ ಇನ್ನಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ. ಸ್ವಿಫ್ಟ್ ಕಾರಿನಲ್ಲಿ (swift) ಪ್ರಯಾಣಿಸುತ್ತಿದ್ದವರು ಮೃತಪಟ್ಟಿದ್ದಾರೆ ಎಂದು ಕೆಲ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದಿಂದ ಸಾಗರದೆಡೆಗೆ (shimoga to sagara) ತೆರಳುತ್ತಿದ್ದ ಇನ್ನೋವಾ (inova car) ಹಾಗೂ ಸಾಗರದಿಂದ ಶಿವಮೊಗ್ಗದೆಡೆಗೆ (sagar to shimoga) ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿನ (swift desire car) ನಡುವೆ ಈ ಭೀಕರ ಅಪಘಾತ (terrible accident) ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಗಾಯಾಳುಗಳ (injured persons) ನೆರವಿಗೆ ಧಾವಿಸಿದ್ದು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ (govt meggan hospital) ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಓರ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಅಪಘಾತದಿಂದ ಹೆದ್ದಾರಿಯಲ್ಲಿ (highway) ಕೆಲ ಸಮಯ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು (Traffic was chaotic) ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (asp) ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ಟ್ರಾಫಿಕ್ ಠಾಣೆ, ಕುಂಸಿ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.