ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ! ಶಿವಮೊಗ್ಗ, ಜು. 6: ಮಲೆನಾಡಿನಲ್ಲಿ ಮುಂಗಾರು ಮಳೆ ಮುಂದುವರಿದಿದ್ದರೂ ಅಬ್ಬರ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ ಹಾಗೂ ಭದ್ರಾ ನೀರಿನ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ. ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ ಲಿಂಗನಮಕ್ಕಿ ಡ್ಯಾಂನ ಒಳಹರಿವು 20,420 ಕ್ಯೂಸೆಕ್ ಗೆ ಇಳಿಕೆಯಾಗಿದೆ. 2030 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1764.8 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1744.4 ಅಡಿ ನೀರು ಸಂಗ್ರಹವಾಗಿತ್ತು. ಭದ್ರಾ ಡ್ಯಾಂನ ಒಳಹರಿವು 7736 ಕ್ಯೂಸೆಕ್ ಗೆ ಇಳಿಕೆಯಾಗಿದೆ. 352 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 130.7 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 138 ಅಡಿಯಿತ್ತು. ಉಳಿದಂತೆ ತುಂಗಾ ಜಲಾಶಯವು ಈಗಾಗಲೇ ಗರಿಷ್ಠ ಮಟ್ಟವಾದ 588.24 ಮೀಟರ್ ತಲುಪಿದೆ. ಪ್ರಸ್ತುತ ಡ್ಯಾಂನ ಒಳಹರಿವು 17,289 ಕ್ಯೂಸೆಕ್ ಇದೆ. 14,662 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಾಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ. ಮಳೆ ವಿವರ : ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಶಿವಮೊಗ್ಗದಲ್ಲಿ 10.20 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ 5.70 ಮಿ.ಮೀ., ತೀರ್ಥಹಳ್ಳಿ 45.80 ಮಿ.ಮೀ., ಸಾಗರ 29.10 ಮಿ.ಮೀ., ಶಿಕಾರಿಪುರ 5.20 ಮಿ.ಮೀ., ಸೊರಬ 8 ಮಿ.ಮೀ ಹಾಗೂ ಹೊಸನಗರದಲ್ಲಿ 42.50 ಮಿ.ಮೀ,. ಮಳೆಯಾಗಿದೆ. ಶನಿವಾರ ಕೂಡ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಮಳೆ ಮುಂದುವರಿದಿದೆ. ತಾಪಮಾನದ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ತಣ್ಣನೆಯ ವಾತಾವರಣ ನೆಲೆಸಿದೆ. ಮುಂದಿನ ಕೆಲ ದಿನಗಳವರೆಗೆ ಜಿಲ್ಲೆಯಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!

ಶಿವಮೊಗ್ಗ (shivamogga), ಜು. 6: ಮಲೆನಾಡಿನಲ್ಲಿ ಮುಂಗಾರು ಮಳೆ (monsoon rain) ಮುಂದುವರಿದಿದ್ದರೂ ಅಬ್ಬರ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳಾದ (major dams) ಲಿಂಗನಮಕ್ಕಿ, ತುಂಗಾ ಹಾಗೂ ಭದ್ರಾ ನೀರಿನ ಒಳಹರಿವಿನಲ್ಲಿ (inflow) ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ.

ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ ಲಿಂಗನಮಕ್ಕಿ ಡ್ಯಾಂನ (linganamakki dam) ಒಳಹರಿವು 20,420 ಕ್ಯೂಸೆಕ್ ಗೆ ಇಳಿಕೆಯಾಗಿದೆ. 2030 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ (out flow). ಪ್ರಸ್ತುತ ಡ್ಯಾಂ ನೀರಿನ ಮಟ್ಟ 1764.8 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1744.4 ಅಡಿ ನೀರು ಸಂಗ್ರಹವಾಗಿತ್ತು.

ಭದ್ರಾ ಡ್ಯಾಂನ (bhadra dam) ಒಳಹರಿವು 7736 ಕ್ಯೂಸೆಕ್ ಗೆ ಇಳಿಕೆಯಾಗಿದೆ. 352 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ (out flow). ಪ್ರಸ್ತುತ ಡ್ಯಾಂ ನೀರಿನ ಮಟ್ಟ 130.7 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 138 ಅಡಿಯಿತ್ತು.

ಉಳಿದಂತೆ ತುಂಗಾ ಜಲಾಶಯವು (tunga dam) ಈಗಾಗಲೇ ಗರಿಷ್ಠ ಮಟ್ಟವಾದ 588.24 ಮೀಟರ್ ತಲುಪಿದೆ. ಪ್ರಸ್ತುತ ಡ್ಯಾಂನ ಒಳಹರಿವು 17,289 ಕ್ಯೂಸೆಕ್ ಇದೆ. 14,662 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಾಭದ್ರಾ ಜಲಾಶಯಕ್ಕೆ (hosapete tungabhadra dam) ಬಿಡಲಾಗುತ್ತಿದೆ.

ಮಳೆ ವಿವರ : ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಶಿವಮೊಗ್ಗದಲ್ಲಿ (shimoga) 10.20 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ (bhadravathi) 5.70 ಮಿ.ಮೀ., ತೀರ್ಥಹಳ್ಳಿ (thirthalli) 45.80 ಮಿ.ಮೀ., ಸಾಗರ (sagara) 29.10 ಮಿ.ಮೀ., ಶಿಕಾರಿಪುರ (shikaripura) 5.20 ಮಿ.ಮೀ., ಸೊರಬ (sorabha) 8 ಮಿ.ಮೀ ಹಾಗೂ ಹೊಸನಗರದಲ್ಲಿ (hosanagara) 42.50 ಮಿ.ಮೀ,. ಮಳೆಯಾಗಿದೆ.

ಶನಿವಾರ ಕೂಡ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು (cloudy weather), ಮಳೆ ಮುಂದುವರಿದಿದೆ. ತಾಪಮಾನದ ಪ್ರಮಾಣದಲ್ಲಿ (temperature scale) ಗಣನೀಯ ಇಳಿಕೆಯಾಗಿದೆ. ತಣ್ಣನೆಯ ವಾತಾವರಣ ನೆಲೆಸಿದೆ. ಮುಂದಿನ ಕೆಲ ದಿನಗಳವರೆಗೆ ಜಿಲ್ಲೆಯಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

Shimoga - Head-on collision between two cars: Three dead and five injured! ಶಿವಮೊಗ್ಗ - ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಮೂವರು ಸಾವು – ಐವರಿಗೆ ಗಾಯ! Previous post ಶಿವಮೊಗ್ಗ – ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಮೂವರು ಸಾವು – ಐವರಿಗೆ ಗಾಯ!
shimoga: A car collided with an electric pole on the side of the road! ಶಿವಮೊಗ್ಗ : ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ! Next post ಶಿವಮೊಗ್ಗ : ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ!