Famous Kannada presenter actress aparna Vidhiwasa! ಕನ್ನಡದ ಖ್ಯಾತ ನಿರೂಪಕಿ ನಟಿ ಅಪರ್ಣಾ ವಿಧಿವಶ! death anchor actress

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ವಿಧಿವಶ!

ಬೆಂಗಳೂರು (bengaluru), ಜು. 12: ಖ್ಯಾತ ನಿರೂಪಕಿ, ನಟಿ ಅಪರ್ಣಾ ವಸ್ತಾರೆ (58) #aparna_actress ಅವರು ಅನಾರೋಗ್ಯದಿಂದ ಗುರುವಾರ ರಾತ್ರಿ (ಜುಲೈ 11) ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ (private hospital) ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ (passed away).

ಶ್ವಾಸಕೋಶದ ಕ್ಯಾನ್ಸರ್ (lung cancer) ನಿಂದ ಅಪರ್ಣಾ (aparna) ಅವರು ಬಳಲುತ್ತಿದ್ದರು. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಜಯನಗರದ (jayanagara) ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾತ್ರಿ 9.45 ನಿಮಿಷಕ್ಕೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಚಿಕಿತ್ಸೆ (treatment) ಪಡೆದುಕೊಳ್ಳುತ್ತಿದ್ದರು ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.

ಬನಶಂಕರಿಯಲ್ಲಿರುವ (banashankari) ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಅಪರ್ಣಾ ಅವರ ಮೃತದೇಹವನ್ನು ತರಲಾಗಿದ್ದು, ಪಾರ್ಥಿವ ಶರೀರದ (mortal body) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಜನಪ್ರಿಯ ಮುಖ : ಅಪರ್ಣಾ ಅವರು ಚಿಕ್ಕಮಗಳೂರು (chikmagalur) ಜಿಲ್ಲೆ ಪಂಚನಹಳ್ಳಿ ಮೂಲದವರಾಗಿದ್ದಾರೆ. 1990 ರಲ್ಲಿ ದೂರದರ್ಶನದಲ್ಲಿ (dooradarshana) ನಿರೂಪಕಿಯಾಗಿ (anchor) ಅವರು ವೃತ್ತಿ ಜೀವನ ಆರಂಭಿಸಿದ್ದರು. ದೂರದರ್ಶನದಲ್ಲಿ ಅವರು ನಡೆಸಿಕೊಡುತ್ತಿದ್ದ ಕಾರ್ಯಕ್ರಮಗಳ ಮೂಲಕ ಜನಮಾನಸದಲ್ಲಿ ಸಾಕಷ್ಟು ಜನಪ್ರಿಯತೆ ಸಂಪಾದಿಸಿದ್ದರು.

1984 ರಲ್ಲಿ ಖ್ಯಾತ ನಿರ್ದೇಶಕ ಪುಟ್ಟಣ ಕಣಗಾಲ್ (puttana kangal) ಅವರು ನಿರ್ದೇಶಿಸಿದ ಮಸಣದ ಹೂವು ಚಿತ್ರದಲ್ಲಿ ನಟಿಸುವ ಮೂಲಕ ಸಿನಿಮಾ ರಂಗಕ್ಕೆ (cinema) ಪದಾರ್ಪಣೆ ಮಾಡಿದ್ದರು. ಧಾರವಾಹಿಗಳಲ್ಲಿ (serial), ರಿಯಾಲಿಟಿ ಶೋ, ಕಾಮಿಡಿ ಕಾರ್ಯಕ್ರಗಳಲ್ಲಿಯೂ ಅವರು ನಟಿಸಿದ್ದರು. ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿಯೂ ಅವರು ಸ್ಪರ್ಧಿಯಾಗಿದ್ದರು.

ಶೋಕ : ನಟಿ ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ (cm siddaramaiah) ಸೇರಿದಂತೆ ಕನ್ನಡ ಚಲನಚಿತ್ರರಂಗ ಹಾಗೂ ನಾಡಿನ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ (condolence) ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ (ಟ್ವಿಟರ್) ನಲ್ಲಿ ಸಂತಾಪ ಸಂದೇಶ ಹಾಕಿದ್ದಾರೆ.

‘ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿಯಾಗಿದೆ.

ಮೃತ ಅಪರ್ಣಾರವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುವುದಾಗಿ’ ಸಿಎಂ ಸಿದ್ದರಾಮಯ್ಯ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು! ಶಿವಮೊಗ್ಗ, ಜು. 11: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ನದಿಗಳ ನೀರಿನ ಹರಿವಿನಲ್ಲಿ ಇಳಿಕೆಯಾಗಿದೆ. ಇದರಿಂದ ಪ್ರಮುಖ ಡ್ಯಾಂಗಳ ಒಳಹರಿವಿನಲ್ಲಿ ಕುಸಿತವಾಗಿದೆ. ಮತ್ತೊಂದೆಡೆ, ಗುರುವಾರ ತಾಪಮಾನದ ಪ್ರಮಾಣದಲ್ಲಿ ಏರಿಕೆಯಾಗಿದೆ.’ ಗುರುವಾರ ಬೆಳಿಗ್ಗೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂ ನೀರಿನ ಒಳಹರಿವು 13,128 ಕ್ಯೂಸೆಕ್ ಗೆ ಇಳಿಕೆಯಾಗಿದೆ. 3422 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1772. 1 (ಗರಿಷ್ಠ ಮಟ್ಟ : 1819) ಅಡಿಯಿದೆ. ಭದ್ರಾ ಡ್ಯಾಂ ಒಳಹರಿವು ಕೂಡ ಇಳಿಕೆಯಾಗಿದ್ದು, 6246 ಕ್ಯೂಸೆಕ್ ಇದೆ. 158 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 136 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 140. 1 ಅಡಿಯಿತ್ತು. ಉಳಿದಂತೆ ತುಂಗಾ ಡ್ಯಾಂನ ಒಳಹರಿವು 8869 ಕ್ಯೂಸೆಕ್ ಗೆ ಇಳಿಕೆಯಾಗಿದೆ. ಈಗಾಗಲೇ ಡ್ಯಾಂನ ಗರಿಷ್ಠ ಮಟ್ಟವಾದ 588. 24 ಅಡಿ ತಲುಪಿರುವುದರಿಂದ, ಒಳಹರಿವಿನಷ್ಟೆ ನೀರನ್ನು ಹೊಸಪೇಟೆಯ ಟಿಬಿ ಡ್ಯಾಂಗೆ ಹರಿ ಬಿಡಲಾಗುತ್ತಿದೆ. ಮಳೆ ವಿವರ: ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಶಿವಮೊಗ್ಗ 7. 40 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ 5. 10 ಮಿ.ಮೀ., ತೀರ್ಥಹಳ್ಳಿ 28. 90 ಮಿಮೀ, ಸಾಗರ 20. 60 ಮಿಮೀ, ಶಿಕಾರಿಪುರ 4. 60 ಮಿಮೀ, ಸೊರಬ 10. 80 ಮಿಮೀ ಹಾಗೂ ಹೊಸನಗರದಲ್ಲಿ 28.80 ಮಿಮೀ ವರ್ಷಧಾರೆಯಾಗಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿಯೂ ವರ್ಷಧಾರೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಮಾಣಿಯಲ್ಲಿ 61 ಮಿಮೀ, ಯಡೂರು 50 ಮಿಮೀ, ಹುಲಿಕಲ್ 41 ಮಿಮೀ, ಮಾಸ್ತಿಕಟ್ಟೆ 41 ಮಿಮೀ, ಚಕ್ರಾ 65 ಮಿಮೀ, ಸಾವೇಹಕ್ಲು 66 ಮಿಮೀ ಮಳೆಯಾಗಿದೆ. Previous post ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು!
The villagers revived the government school which had reached the state of closing the door! ಬಾಗಿಲು ಮುಚ್ಚುವ ಸ್ಥಿತಿಗೆ ತಲುಪಿದ್ದ ಸರ್ಕಾರಿ ಶಾಲೆಗೆ ಮರು ಜೀವ ನೀಡಿದ ಗ್ರಾಮಸ್ಥರು! Next post ಬಾಗಿಲು ಮುಚ್ಚುವ ಸ್ಥಿತಿಗೆ ತಲುಪಿದ್ದ ಸರ್ಕಾರಿ ಶಾಲೆಗೆ ಮರು ಜೀವ ನೀಡಿದ ಗ್ರಾಮಸ್ಥರು!