
‘ನೀರಿಗೆ ಹಾಹಾಕಾರ – ಅಸ್ವಚ್ಛತೆ’ : ಪ್ರತಿಭಟನೆ ಎಚ್ಚರಿಕೆ ನೀಡಿದ ಗ್ರಾಪಂ ಸದಸ್ಯ!
ಶಿವಮೊಗ್ಗ, ಫೆ. 27: ‘ಶಿವಮೊಗ್ಗ ನಗರದ ಹೊರವಲಯ ಚೆನ್ನಾಮುಂಭಾಪುರ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಸ್ವಚ್ಛತಾ ಕಾರ್ಯವು ಸಮರ್ಪಕವಾಗಿ ನಡೆಯುತ್ತಿಲ್ಲವಾಗಿದೆ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ಚೆನ್ನಾಮುಂಭಾಪುರ ದೂರಿದ್ದಾರೆ.
ಈಗಾಗಲೇ ಈ ಕುರಿತಂತೆ ಅಬ್ಬಲಗೆರೆ ಗ್ರಾಪಂ ಪಿಡಿಓ ಹಾಗೂ ಆಡಳಿತದ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮಸ್ಥರು ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಗ್ರಾಪಂ ಆಡಳಿತ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಗ್ರಾಪಂ ಸದಸ್ಯರು ಆರೋಪಿಸಿದ್ದಾರೆ.
ಈ ಕುರಿತಂತೆ ತಾಲೂಕು ಪಂಚಾಯ್ತಿ ಇಓ ಅವರ ಗಮನಕ್ಕೆ ತರಲಾಗಿದೆ. ಸಮಸ್ಯೆ ಪರಿಹಾರವಾಗದಿದ್ದರೆ ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಮಂಜುನಾಥ್ ಚೆನ್ನಾಮುಂಭಾಪುರ ಅವರು ಎಚ್ಚರಿಕೆ ನೀಡಿದ್ದಾರೆ.