
ಮಲೆನಾಡಿನಲ್ಲಿ ಭಾರೀ ಮಳೆ : ಲಿಂಗನಮಕ್ಕಿ, ತುಂಗಾ, ಭದ್ರಾ ಡ್ಯಾಂ ಒಳಹರಿವಿನಲ್ಲಿ ಏರಿಕೆ!
ಶಿವಮೊಗ್ಗ (shivamogga), ಜು. 15: ಮಲೆನಾಡಿನಲ್ಲಿ ಮುಂಗಾರು ಮಳೆ (malnad monsoon rain) ಕ್ರಮೇಣ ತೀವ್ರಗೊಳ್ಳಲಾರಂಭಿಸಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ (western ghat areas) ಆರ್ಭಟ ಜೋರಾಗಿದೆ. ನದಿಗಳ ನೀರಿನ (rivers) ಹರಿವಿನಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಪ್ರಮುಖ ಡ್ಯಾಂಗಳ (dams) ಒಳಹರಿವಿನಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ.
ಸೋಮವಾರ ಬೆಳಿಗ್ಗೆಯ ಮಾಹಿತಿಯಂತೆ ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂ (linganamakki dam) ಒಳಹರಿವು 45,115 ಕ್ಯೂಸೆಕ್ ಗೆ ಏರಿಕೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಡ್ಯಾಂನಲ್ಲಿ 2. 45 ಅಡಿ ನೀರು ಸಂಗ್ರಹವಾಗಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1778. 15 (ಗರಿಷ್ಠ ಮಟ್ಟ : 1819) ಅಡಿಯಿದೆ.
ಮಧ್ಯ ಕರ್ನಾಟಕದ (central karnataka) ಪ್ರಮುಖ ಜಲಾಶವಾದ ಭದ್ರಾ ಒಳಹರಿವು (bhadra dam) 16,041 ಕ್ಯೂಸೆಕ್ ಗೆ ಹೆಚ್ಚಳವಾಗಿದೆ. 162 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ (out flow). ಕಳೆದ 24 ಗಂಟೆ ವೇಳೆ ಡ್ಯಾಂನಲ್ಲಿ 2 ಅಡಿಯಷ್ಟು ನೀರು ಸಂಗ್ರಹವಾಗಿದೆ. ಪ್ರಸ್ತುತ ಡ್ಯಾಂ (dam) ನೀರಿನ ಮಟ್ಟ 141. 3 (ಗರಿಷ್ಠ ಮಟ್ಟ : 186) ಅಡಿಯಿದೆ.
ಉಳಿದಂತೆ ಈಗಾಗಲೇ ಗರಿಷ್ಠ ಮಟ್ಟ ತಲುಪಿರುವ ತುಂಗಾ ಜಲಾಶಯಕ್ಕೆ, ಸೋಮವಾರ ಬೆಳಿಗ್ಗೆಯ ಮಾಹಿತಿಯಂತೆ 33 ಸಾವಿರ ಕ್ಯೂಸೆಕ್ ಒಳಹರಿವಿದೆ (inflow) ಇದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಹಾಗೂ ಒಳಹರಿವು ಹೆಚ್ಚಳವಾಗುತ್ತಿರುವುದರಿಂದ ಒಳಹರಿವಿನಷ್ಟೆ ನೀರನ್ನು ಹೊಸಪೇಟೆ ತುಂಗಾಭದ್ರಾ ಡ್ಯಾಂಗೆ (hosapete tungabhadra dam) ಹೊರ ಬಿಡಲಾಗುತ್ತಿದೆ.