
ಭಾರೀ ಮಳೆ : ಜು. 16 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ!
ಶಿವಮೊಗ್ಗ (shivamogga), ಜು. 15: ಮಲೆನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ (heavy rainfall). ಮುನ್ನೆಚ್ಚರಿಕೆ ಕ್ರಮವಾಗಿ ಜು. 16 ರ ಮಂಗಳವಾರ ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲಾ – ಕಾಲೇಜ್ ಗಳಿಗೆ ರಜೆ (school – college holiday) ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ ಹೆಗಡೆ (dc gurudutt hegde) ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ (rain) ಬೀಳುತ್ತಿರುವ ಹಿನ್ನೆಲೆಯಲ್ಲಿ ಜು. 16 ರಂದು ಶಾಲಾ – ಕಾಲೇಜ್ ಗಳಿಗೆ ರಜೆ ಘೋಷಣೆ (holiday announcement for schools and colleges) ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಮೊದಲು ಜಿಲ್ಲೆಯ ಹೊಸನಗರ, ಸಾಗರ ತಾಲೂಕು ಆಡಳಿತಗಳು ತಮ್ಮ ವ್ಯಾಪ್ತಿಯ ಶಾಲಾ-ಕಾಲೇಜ್ ಗಳಿಗೆ ರಜೆ ಘೋಷಣೆ ಮಾಡಿದ್ದವು. ಇದೀಗ ಜಿಲ್ಲಾಡಳಿತವು ಜಿಲ್ಲೆಯ ಎಲ್ಲ ಶಾಲಾ – ಕಾಲೇಜ್ ಗಳಿಗೂ ರಜೆ ಘೋಷಣೆ ಮಾಡಿದೆ.
ಜಿಲ್ಲೆಯಲ್ಲಿ ಜು. 15 ಹಾಗೂ ಜು. 16 ರಂದು ಭಾರೀ ಮಳೆಯಾಗುವ (heavy rainfall) ಸಾಧ್ಯತೆಯಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ರೆಡ್ ಅಲರ್ಟ್ (red alert) ಘೋಷಣೆ ಮಾಡಿತ್ತು. ಕಳೆದೆರೆಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹಳ್ಳಕೊಳ್ಳ, ಕೆರೆಕಟ್ಟೆ, ನದಿಗಳು ಮೈದುಂಬಿ ಹರಿಯುತ್ತಿವೆ.