
ಮಲೆನಾಡಿನಲ್ಲಿ ಮಳೆಯ ಅಬ್ಬರ : ಭದ್ರಾ ಡ್ಯಾಂ ನೀರಿನ ಸಂಗ್ರಹದಲ್ಲಿ ಗಣನೀಯ ಏರಿಕೆ!
ಶಿವಮೊಗ್ಗ (shivamogga), ಜು. 19: ಮಧ್ಯ ಕರ್ನಾಟಕದ (central karnataka) ಪ್ರಮುಖ ಜಲಾಶಯ ಭದ್ರಾ ಡ್ಯಾಂ (bhadra dam) ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ (heavy rainfall) ಮುಂದುವರಿದಿದೆ. ಇದರಿಂದ ಡ್ಯಾಂ ಒಳಹರಿವಿನಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಂಡುಬರಲಾರಂಭಿಸಿದೆ. ಇದರಿಂದ ಕಳೆದ 24 ಗಂಟೆಗಳ ಅವಧಿಯಲ್ಲಿ, ಡ್ಯಾಂನಲ್ಲಿ 4 ಅಡಿಯಷ್ಟು ನೀರು ಸಂಗ್ರಹವಾಗಿದೆ!
ಶುಕ್ರವಾರ ಬೆಳಿಗ್ಗೆಯ ಮಾಹಿತಿಯಂತೆ ಡ್ಯಾಂನ ಒಳಹರಿವು (inflow) 49,555 ಕ್ಯೂಸೆಕ್ ಗೆ ಏರಿಕೆಯಾಗಿದೆ. 181 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ (out flow). ಪ್ರಸ್ತುತ ಡ್ಯಾಂನಲ್ಲಿ 157. 11 (ಗರಿಷ್ಠ ಮಟ್ಟ : 186) ಅಡಿ ನೀರು ಸಂಗ್ರಹವಾಗಿದೆ (water storage). ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 141. 7 ಅಡಿ ನೀರಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ ಡ್ಯಾಂನಲ್ಲಿ (dam) ಸುಮಾರು 16 ಅಡಿ ಹೆಚ್ಚು ನೀರು ಸಂಗ್ರಹವಾಗಿದೆ.
ಉಳಿದಂತೆ ತುಂಗಾ ಜಲಾಶಯದ (tunga dam) ಒಳಹರಿವಿನಲ್ಲಿ ತುಸು ಇಳಿಕೆ ಕಂಡುಬಂದಿದೆ. 68,895 ಕ್ಯೂಸೆಕ್ (cusec) ಒಳಹರಿವಿದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟವಾದ (maximum level) 588. 24 ಮೀಟರ್ ತಲುಪಿರುವುದರಿಂದ 64,312 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ (out flow).
ಮಳೆ ವಿವರ : ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆಯ (rain) ವಿವರ ಈ ಮುಂದಿನಂತಿದೆ. ಶಿವಮೊಗ್ಗ (shimoga) 37. 80 ಮಿ.ಮೀ., ಭದ್ರಾವತಿ (bhadravathi) 27. 10 ಮಿ.ಮೀ., ತೀರ್ಥಹಳ್ಳಿ (thirthahalli) 83. 60 ಮಿ.ಮೀ., ಸಾಗರ (sagar) 97. 20 ಮಿ.ಮೀ., ಶಿಕಾರಿಪುರ (shikaripur) 52. 60 ಮಿ.ಮೀ., ಸೊರಬ (sorab) 77. 40 ಮಿ.ಮೀ. ಹಾಗೂ ಹೊಸನಗರದಲ್ಲಿ (hosanagara) 102 ಮಿ.ಮೀ. ವರ್ಷಧಾರೆಯಾಗಿದೆ.