Huge amount of water out of Tunga Dam! ತುಂಗಾ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಹೊರಕ್ಕೆ!

ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಜಲಾಶಯ ಭರ್ತಿಗೆ ಕೇವಲ 8 ಅಡಿ ಬಾಕಿ..!

ಶಿವಮೊಗ್ಗ, ಜು. 27: ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ (shimoga – davanagere) ರೈತರ ಜೀವನಾಡಿ ಎಂದೇ ಕರೆಯಲಾಗುವ ಹಾಗೂ ಮಧ್ಯ ಕರ್ನಾಟಕದ ಪ್ರಮುಖ ಜಲಾಶಯವಾದ ಭದ್ರಾ (bhadra dam) ಭರ್ತಿಗೆ ಇನ್ನೂ ಕೇವಲ 8 ಅಡಿ ನೀರು ಮಾತ್ರ ಬೇಕಾಗಿದೆ. ಪ್ರಸ್ತುತ ಜಲಾನಯನ ಪ್ರದೇಶ (catchment areas) ವ್ಯಾಪ್ತಿಯಲ್ಲಿ ಬೀಳುತ್ತಿರುವ ಭಾರೀ ಮಳೆ (heavy rainfall) ಮುಂದುವರಿದರೆ, ಇನ್ನೂ ಕೆಲ ದಿನಗಳಲ್ಲಿಯೇ ಡ್ಯಾಂ ಗರಿಷ್ಠ ಮಟ್ಟ ತಲುಪಲಿದೆ..!

ಚಿಕ್ಕಮಗಳೂರು (chikkamagaluru) ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಮಳೆಯ (rain) ಆರ್ಭಟ ಜೋರಾಗಿದೆ. ಇದರಿಂದ ಡ್ಯಾಂಗೆ ಹರಿದು ಬರುತ್ತಿರುವ (inflow) ನೀರಿನ ಪ್ರಮಾಣದಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಂಡುಬರಲಾರಂಭಿಸಿದೆ.

ಕಳೆದ 24 ಗಂಟೆ ಅವಧಿಯಲ್ಲಿ ಡ್ಯಾಂಗೆ 4. 3 ಅಡಿಯಷ್ಟು ನೀರು ಸಂಗ್ರಹವಾಗಿದೆ. ಜು. 27 ರ ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ, ಡ್ಯಾಂನ (reservoir) ಒಳಹರಿವು 49,081 ಕ್ಯೂಸೆಕ್ ಗೆ ಏರಿಕೆಯಾಗಿದೆ! ಶುಕ್ರವಾರ ಒಳಹರಿವಿನ ಪ್ರಮಾಣ35,138 ಕ್ಯೂಸೆಕ್ ಇತ್ತು. ಉಳಿದಂತೆ ಶನಿವಾರ 206 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ (outflow).

ಪ್ರಸ್ತುತ ಜಲಾಶಯದ ನೀರಿನ ಮಟ್ಟ (bhadra dam water level) 178 (ಗರಿಷ್ಠ ಮಟ್ಟ : 186) ಅಡಿ ಇದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 158 ಅಡಿಯಷ್ಟಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ 20 ಅಡಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ.

ಒಟ್ಟಾರೆ ಮಲೆನಾಡು (malnad) ಭಾಗದಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ (heavy to heavy rainfall) ನದಿ, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿವೆ. ಪ್ರಮುಖ ಜಲಾಶಯಗಳು ಗರಿಷ್ಠ ಮಟ್ಟಕ್ಕೆ ತಲುಪಲಾರಂಭಿಸಿರುವುದು ನಿಜಕ್ಕೂ ಸಂತಸಕರ ಸಂಗತಿಯಾಗಿದೆ.

Rainfall in Western Ghats : Maximum 325 millimeter rain in Chakra ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಮಳೆಯ ಆರ್ಭಟ : ಚಕ್ರಾದಲ್ಲಿ ಅತ್ಯಧಿಕ 325 ಮಿ.ಮೀ. ಮಳೆ! Previous post ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಮಳೆಯ ಆರ್ಭಟ : ಚಕ್ರಾದಲ್ಲಿ ಅತ್ಯಧಿಕ 325 ಮಿ.ಮೀ. ಮಳೆ!
Linganamakki Reservoir water level reaches 1807 feet: Second warning from KPCL! 1807 ಅಡಿಗೆ ತಲುಪಿದ ಲಿಂಗನಮಕ್ಕಿ ಜಲಾಶಯ ನೀರಿನ ಮಟ್ಟ : ಕೆಪಿಸಿಎಲ್ ನಿಂದ ಎರಡನೇ ವಾರ್ನಿಂಗ್! Next post 1807 ಅಡಿಗೆ ತಲುಪಿದ ಲಿಂಗನಮಕ್ಕಿ ಜಲಾಶಯ ನೀರಿನ ಮಟ್ಟ : ಕೆಪಿಸಿಎಲ್ ನಿಂದ ಎರಡನೇ ವಾರ್ನಿಂಗ್!