
ಎಸ್.ಎಲ್.ಎಲ್.ಸಿ – ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿವಮೊಗ್ಗ ಎನ್.ಎಸ್.ಯು.ಐ ಸಂಘಟನೆಯಿಂದ ಅಭಿನಂದನಾ ಸಮಾರಂಭ
ಶಿವಮೊಗ್ಗ (shivamogga), ಜು. 31: ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. (nsui) ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ನಮ್ಮೂರ ಹೆಮ್ಮೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರೋಜಿರಾವ್ ತಿಳಿಸಿದ್ದಾರೆ.
ಈ ಕುರಿತಂತೆ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಎಸ್.ಎಸ್.ಎಲ್.ಸಿ. (sslc) ಹಾಗೂ ಪಿಯುಸಿಯಲ್ಲಿ (puc) ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು (students) ಅಭಿನಂದಿಸಲಾಗವುದು.
ಹಾಗೆಯೇ ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‌ಗಳಲ್ಲಿ ರ್ಯಾಂಕ್ ಗಳಿಸಿದ ಮತ್ತು ಯುಪಿಎಸ್ಸಿ-ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದಿಸಲಾಗುವುದು ಎಂದು ತಿಳಿಸಿದ್ದಾರೆ.
ಆಗಸ್ಟ್ 03/08/2024 ರಂದು ಶಿವಮೊಗ್ಗ ನಗರದ ಕುವೆಂಪು ರಂಗಮಂದಿರಲ್ಲಿ (shimoga kuvempu ranga mandhira) ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳು, ಸಾಧಕರು ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿಕೊಡಲು ಅವರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9148928183 ಗೆ ಕರೆ ಮಾಡಿ ಹೆಸರು ನೊಂದಾಯಸುವಂತೆ ಚಂದ್ರೋಜಿರಾವ್ ಅವರು ತಿಳಿಸಿದ್ದಾರೆ.