
ಸಾಗರ ಎಆರ್ಟಿಓ ಕಚೇರಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ!
ಸಾಗರ (sagar), ಆ. 1: ಸಾಗರದ ಎ.ಆರ್.ಟಿ.ಓ ಕಚೇರಿಗೆ ಲೋಕಾಯುಕ್ತ ಪೊಲೀಸ್ ತಂಡ (lokayukta police team) ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಜು. 31 ರಂದು ನಡೆದಿದೆ.
ಕಚೇರಿ ಸಿಬ್ಬಂದಿಗಳ ಹಾಜರಾತಿ ಪುಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‌ಗಳ, ಸಾರಥಿ ಮತ್ತು ವಾಹನ ತಂತ್ರಾಂಶವನ್ನು ಪರಿಶೀಲಿಸಿ ಎಲ್.ಎಲ್.ಆರ್., ಡಿ.ಎಲ್., ಎಫ್.ಸಿ.,
ಹೊಸ ವಾಹನಗಳ ನೊಂದಣಿ, ವಾಹನಗಳ ವರ್ಗಾವಣೆ, ದಂಡವ ಸೂಲಿ, ಡಿಜಿಟಲ್ ಕಾರ್ಡ್ ಪ್ರಿಂಟಿಂಗ್, ಆರ್.ಸಿ. ಕಾರ್ಡ್ ವಿತರಣೆ ಮತ್ತು ಸಕಾಲ ಯೋಜನೆಯಡಿಯಲ್ಲಿ ಬಾಕಿ ಇರುವ ಅರ್ಜಿಗಳಿಗೆ ಸಂಬಂಧಪಟ್ಟ ದಾಖಲಾತಿಗಳ ಪರಿಶೀಲನೆ ನಡೆಸಿದರು.
ಪರಿಶೀಲನಾ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಬಗ್ಗೆ ಎ.ಆರ್.ಟಿ.ಓ ವೀರೇಶ್.ಡಿ.ಹೆಚ್ ರವರಿಗೆ ಸ್ಥಳದಲ್ಲಿಯೇ ಸೂಚನೆಗಳನ್ನು ನೀಡಲಾಗಿದ್ದು, ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಲೋಕಾಯುಕ್ತರು ಸೂಚನೆ ನೀಡಿದ್ದಾರೆ.
ಶಿವಮೊಗ್ಗ ಲೋಕಾಯುಕ್ತ ಅಧೀಕ್ಷಕ ಮಂಜುನಾಥ್ ಚೌದರಿ, ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳು ಭೇಟಿಯ ವೇಳೆ ಉಪಸ್ಥಿತರಿದ್ದರು.