
ಶಿವಮೊಗ್ಗ ಜಿಲ್ಲಾ ವಾಣಿಜ್ಯ- ಕೈಗಾರಿಕಾ ಸಂಘದಿಂದ ಯಡಿಯೂರಪ್ಪಗೆ ಸನ್ಮಾನ
ಶಿವಮೊಗ್ಗ, ಮಾ. 3: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದವತಿಯಿಂದ ಅವರನ್ನು ಸನ್ಮಾನಿಸಿ ಅಭಿನಂದಿಸಿತು.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ರಾಜ್ಯದ ಹಾಗೂ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆಗಳನ್ನು ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕ್ಷಣ, ಆರೋಗ್ಯ, ಉದ್ಯಮ, ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ ಎಂದು ಸಂಘಟನೆ ತಿಳಿಸಿದೆ.
ಈ ಸಂದರ್ಭದಲ್ಲಿ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಬಿ.ಆರ್.ಸಂತೋಷ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಪ್ರದೀಪ್ ಎಲಿ, ಹಾಲಸ್ವಾಮಿ, ಗಣೇಶ್ ಅಂಗಡಿ, ಎಂ.ರಾಜ್, ಜೆ.ಆರ್.ವಾಸುದೇವ್ ಮತ್ತಿತರರು ಉಪಸ್ಥಿತರಿದ್ದರು.