Application Invitation for Anganwadi Worker and Assistant Posts ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ Direct Interview for Vacancies under National Health Campaign ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಜು. 3: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (department of women and child development) ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು (anganwadi workers and assistant posts) ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಶಿವಮೊಗ್ಗ (shivamogga)- ಕಾರ್ಯಕರ್ತೆಯರು-34, ಸಹಾಯಕಿಯರು-118, ಭದ್ರಾವತಿ (bhadravati) -ಕಾರ್ಯಕರ್ತೆಯರು-10, ಸಹಾಯಕಿಯರು-72, ಹೊಸನಗರ (hosanagar) -ಕಾರ್ಯಕರ್ತೆಯರು-07, ಸಹಾಯಕಿಯರು-35, ಸಾಗರ (sagar) – ಕಾರ್ಯಕರ್ತೆಯರು-21, ಸಹಾಯಕಿಯರು-62, ಶಿಕಾರಿಪುರ (shikaripur) – ಕಾರ್ಯಕರ್ತೆಯರು-08, ಸಹಾಯಕಿಯರು-55, ಸೊರಬ (sorab)- ಕಾರ್ಯಕರ್ತೆಯರು-38, ಸಹಾಯಕಿಯರು-65, ತೀರ್ಥಹಳ್ಳಿ (thirthahalli)- ಕಾರ್ಯಕರ್ತೆಯರು-09, ಸಹಾಯಕಿಯರು-41.

ಆಸಕ್ತರು ಇಲಾಖೆಯ ವೆಬ್‌ಸೈಟ್ (website) https://karnemakaone.kar.nic.in/abcd/   ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ಹಾಗೂ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆಯಬಹುದಾಗಿದೆ. 

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗ (shivamogga), ಜು. 3: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ (national health campaign) ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು – 9, ತಜ್ಞ ವೈದ್ಯರು (ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ ಸಂಯೋಜಕರ-01 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ನೇರ ನೇಮಕಾತಿ (direct recruitment) ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಎನ್.ಸಿ.ಡಿ. ಕ್ಲಿನಿಕ್ ಜಿಲ್ಲೆಯ ತಾ.ಅ./ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಎಂ.ಬಿ.ಬಿ.ಎಸ್. ವೈದ್ಯರ ಹುದ್ದೆಗೆ ವಿದ್ಯಾರ್ಹತೆ ಎಂ.ಬಿ.ಬಿ.ಎಸ್. (mbbs), ಆಗಿದ್ದು, 2 ವರ್ಷ ಆಸ್ಪತ್ರೆಯಲ್ಲಿ (hospital) ಕಾರ್ಯನಿರ್ವಹಿಸಿದ ಅನುಭವವಿರಬೇಕು. ಗರಿಷ್ಠ ವಯಸ್ಸು 50 ವರ್ಷ, ಮಾಸಿಕ ಸಂಭಾವನೆ ರೂ. 46894/-.

ಎನ್.ಸಿ.ಡಿ. ಕ್ಲಿನಿಕ್ ಜಿಲ್ಲಾ ಆಸ್ಪತ್ರೆ, ಶಿಕಾರಿಪುರದಲ್ಲಿ ಖಾಲಿಯಿರುವ ತಜ್ಞವೈದ್ಯರು (ಎಂ.ಡಿ. ಇಂಟರ್ನಲ್ ಮೆಡಿಸಿನ್) ಹುದ್ದೆಗೆ ಎಂ.ಬಿ.ಬಿ.ಎಸ್.-ಎಂ.ಡಿ. (ಇಂಟರ್ನಲ್ ಮೆಡಿಸಿನ್) ವಿದ್ಯಾರ್ಹತೆ ಹೊಂದಿದ್ದು ಸ್ಪೆಷಲಿಸ್ಟ್ ಹುದ್ದೆಯಲ್ಲಿ 2 ವರ್ಷ ಕಾರ್ಯನಿರ್ವಹಿಸಿದ ಅನುಭವವಿರಬೇಕು. ಗರಿಷ್ಠ ವಯಸ್ಸು 50 ವರ್ಷ, ಮಾಸಿಕ ಸಂಭಾವನೆ ರೂ. 46894/-. (ತಜ್ಞ ವೈದ್ಯರು ಲಭ್ಯವಿಲ್ಲದಿದ್ದಲ್ಲಿ ಎಂ.ಬಿ.ಬಿ.ಎಸ್. ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುವುದು.)

 ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಇಲ್ಲಿ ಖಾಲಿಯಿರುವ ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ ಸಂಯೋಜಕರ ಹುದ್ದೆಗೆ ಬಿ.ಡಿ.ಎಸ್./ಬಿ.ಎ.ಎಂ.ಎಸ್./ಬಿ.ಯು.ಎಂ.ಎಸ್./ ಬಿ.ಹೆಚ್.ಎಂ.ಎಸ್./ಬಿ.ಬೈ.ಎನ್.ಎಸ್./ಎಂ.ಎಸ್.ಸಿ. ನರ್ಸಿಂಗ್/ಎಂ.ಎಸ್.ಸಿ.ಲೈಫ್ ಸೈನ್ಸ್/ಬಿ.ಎಸ್.ಸಿ. ನರ್ಸಿಂಗ್‌ನೊAದಿಗೆ ಎಂ.ಪಿ.ಹೆಚ್/ ಎಂ.ಬಿ.ಎ. ವಿದ್ಯಾರ್ಹತೆ ಹೊಂದಿರಬೇಕು. ಗರಿಷ್ಠ ವಯಸ್ಸು 40 ವರ್ಷ, ಮಾಸಿಕ ಸಂಭಾವನೆ ರೂ. 30000/-. 

ಆಸಕ್ತರು ಆಗಸ್ಟ್ 08 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 4.00 ರವರೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಎನ್.ಸಿ.ಡಿ. ಘಟಕ, ಮೆಗ್ಗಾನ್ ಆಸ್ಪತ್ರೆ ಆವರಣ, ತುಂಗಾ ವಿದ್ಯಾರ್ಥಿನಿಯರ ವಸತಿ ನಿಲಯದ ಎದುರು, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ದಾಖಲೆಗಳ ಮೂಲಪ್ರತಿ ಮತ್ತು ಛಾಯಾಪ್ರತಿಗಳೊಂದಿಗೆ ಭಾಗವಹಿಸುವಂತೆ ಎನ್.ಸಿ.ಡಿ. ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವೈದ್ಯರಿಗೆ ವಿಶೇಷ ಸೂಚನೆ: ಪ್ರತಿ ತಿಂಗಳ 1, 10 ಮತ್ತು 20ನೇ ತಾರೀಖಿನಿಂದು ವೈದ್ಯರ ಮತ್ತು ತಜ್ಞ ವೈದ್ಯರ ಹುದ್ದೆಗೆ (ರಜೆ ಇರುವ ದಿನವಿದ್ದರೆ ನಂತರದ ದಿನದಲ್ಲಿ) ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220685 ನ್ನು ಸಂಪರ್ಕಿಸುವುದು.

Death of an anonymous woman: request to trace the heirs ಶಿವಮೊಗ್ಗದಲ್ಲಿ ಅನಾಮಧೇಯ ಮಹಿಳೆ ಸಾವು : ವಾರಸುದಾರರ ಪತ್ತೆಗೆ ಮನವಿ Previous post ಅನಾಮಧೇಯ ಮಹಿಳೆ ಸಾವು : ವಾರಸುದಾರರ ಪತ್ತೆಗೆ ಮನವಿ
The eye-catching beauty of the water body of Joga Falls! ಕಣ್ಮನ ಸೆಳೆಯುತ್ತಿರುವ ಜೋಗ ಜಲಪಾತದ ಜಲರಾಶಿಯ ಸೌಂದರ್ಯ! Next post ಕಣ್ಮನ ಸೆಳೆಯುತ್ತಿರುವ ಜೋಗ ಜಲಪಾತದ ಜಲರಾಶಿಯ ಸೌಂದರ್ಯ!