
ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ
ಶಿವಮೊಗ್ಗ, ಮಾ. 2: ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದೆಲ್ಲೆಡೆ ಹೆಚ್ಚಾಗಿರುವ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕಾ ಕಾರ್ಯಕ್ರಮಗಳನ್ನು ಮಾರ್ಚ್ 04 ರಿಂದ ಆರು ತಿಂಗಳವರೆಗೆ, ಪ್ರತಿ ಭಾನುವಾರದಂದು ನಗರದ ರಾಜೀವ್‍ಗಾಂಧಿ ಬಡಾವಣೆಯಲ್ಲಿರುವ ಮಹಾವೀರ್ ಗೋಶಾಲೆಯ ಪಕ್ಕದಲ್ಲಿ ಆಯೋಜಿಸಿದೆ.
ಮಾನವೀಯ ಹಾಗೂ ವೈಜ್ಞಾನಿಕ ರೀತಿಯಲ್ಲಿ ಶ್ವಾನಗಳ ಸಂತತಿಯನ್ನು ನಿಯಂತ್ರಣದಲ್ಲಿಡುವುದು, ರೇಬಿಸ್, ಲೆಪ್ಟೋಸ್ಟೈರಾ ಇತ್ಯಾದಿ ಪ್ರಾಣಿ ಜನ್ಯ ರೋಗಗಳಿಂದ ಸಾರ್ವಜನಿಕರ ಆರೋಗ್ಯ ರಕ್ಷಣೆ ಮಾಡುವುದು ಹಾಗೂ ಬೀದಿನಾಯಿಗಳಿಂದ ಸಾರ್ವಜನಿಕರಿಗಾಗುವ ತೊಂದರೆಗಳಿಂದ ಮುಕ್ತಗೊಳಿಸುವುದು ಈ ಶಸ್ತ್ರಚಿಕಿತ್ಸೆಯ ಉದ್ದೇಶವಾಗಿದೆ. ಬೀದಿನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿ ರೇಬಿಸ್ ವಿರುದ್ಧ ಲಸಿಕೆ ಹಾಕಿ ಕಿವಿಗೆ ಗುರುತು ಮಾಡಿ ಕಾರ್ಯಾಚರಣೆ ಪೂರ್ಣವಾದ ಬಳಿಕ ಅವುಗಳನ್ನು ಹಿಡಿದ ಸ್ಥಳಗಳಲ್ಲಿ ಬಿಡಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಡಾ|| ರೇಖಾ ಎಸ್.ಟಿ., ಪಶುವೈದ್ಯಾಧಿಕಾರಿಗಳು, ಮಹಾನಗರ ಪಾಲಿಕೆ- 9886326268 ಹಾಗೂ ಬಸವಪ್ರಸಾದ್ (ಎಸ್‍ಎಆರ್ ಸಿ) -9964289695 ರವರನ್ನು ಸಂಪರ್ಕಿಸಬಹುದಾಗಿದೆ.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 25 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 25: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 25-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...
shimoga | ಶಿವಮೊಗ್ಗ : ಅಂತಿಮ ಯಾತ್ರೆಗೆ ಜನಸಾಗರ.. ಮುಗಿಲು ಮುಟ್ಟಿದ ಆಕ್ರಂದನ..!
shimoga | Manjunath Rao who was killed in a terrorist attack: Arrangements made for the last rites at Vijayanagara residence in Shivamogga
shimoga | ಭಯೋತ್ಪಾದಕ ಗುಂಡೇಟಿಗೆ ಬಲಿಯಾದ ಮಂಜುನಾಥ್ ರಾವ್ : ಶಿವಮೊಗ್ಗದ ವಿಜಯನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
shimoga|ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 24 ರ ತರಕಾರಿ ಬೆಲೆಗಳವಿವರ
ಶಿವಮೊಗ್ಗ (shivamogga), ಏ. 24: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 24-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 23 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 23: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 23-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...