'BJP-JDS Conspiracy' : CM Siddaramaiah ‘ಬಿಜೆಪಿ - ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗಲ್ಲ’ : ಸಿಎಂ ಸಿದ್ದರಾಮಯ್ಯ

‘ಬಿಜೆಪಿ – ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗಲ್ಲ’ : ಸಿಎಂ ಸಿದ್ದರಾಮಯ್ಯ

ಮೈಸೂರು, ಆ. 9: ‘ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿದ್ದೆನೆ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ, ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ’ ಎಂದು ಸಿಎಂ ಸಿದ್ದರಾಮಯ್ಯ (cm siddaramaiah) ತಿಳಿಸಿದ್ದಾರೆ.

ಬಿಜೆಪಿ – ಜೆಡಿಎಸ್ ಪಕ್ಷಗಳ ವಿರುದ್ದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್ ಜನಾಂದೋಲನ ಸಮಾವೇಶ (jan andolan samavesha) ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಬಿಜೆಪಿ, ಜೆಡಿಎಸ್ (bjp, jds) ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ (central govt) ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಬೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಎಚ್ಚರಿಸಿದರು.

ಜೆಡಿಎಸ್ ನ ದೇವೇಗೌಡರು (h d devegowda) ಮತ್ತು ಕುಮಾರಸ್ವಾಮಿ (h d kumarswamy) ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ (modi) ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. (dcm) ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ (chief minister). ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ (wife) ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ (cm) ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ (corruption) ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ (politics) ಇರುವವರೆಗೂ  ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದರು.

ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983 ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250 ರೂ. ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು ಎಂದು ಹೇಳಿದರು.

ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ ಎಂದರು.

ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ (padayatra) ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ ಎಂದು ಗುಡುಗಿದರು.  

ಯಡಿಯೂರಪ್ಪ (yediyurappa) ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ (posco) ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ?  ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್ (r ashok), ವಿಜಯೇಂದ್ರ (b y vijayendra) ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆಯಾ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

15 ಬಜೆಟ್ (budget) ಮಂಡಿಸಿದವನು ನಾನು. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. 

ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ (assembly), ಲೋಕಸಭೆ ಚುನಾವಣೆ (loksabha election) ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು  ಸೈಟು ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

A woman died of rabies as a result of being bitten by a cat! ಬೆಕ್ಕು ಕಚ್ಚಿದ ಪರಿಣಾಮ ರೇಬೀಸ್ ರೋಗಕ್ಕೆ ತುತ್ತಾಗಿ ಮಹಿಳೆ ಸಾವು! Previous post ಬೆಕ್ಕು ಕಚ್ಚಿದ ಪರಿಣಾಮ ರೇಬೀಸ್ ರೋಗಕ್ಕೆ ತುತ್ತಾಗಿ ಮಹಿಳೆ ಸಾವು!
Murder case : Life imprisonment for 7 youths of Shimoga! ಕೊಲೆ ಪ್ರಕರಣ : ಶಿವಮೊಗ್ಗದ 7 ಯುವಕರಿಗೆ ಜೀವಾವಧಿ ಶಿಕ್ಷೆ! Next post ಕೊಲೆ ಪ್ರಕರಣ : ಶಿವಮೊಗ್ಗದ 7 ಯುವಕರಿಗೆ ಜೀವಾವಧಿ ಶಿಕ್ಷೆ!