
ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮ
ಭದ್ರಾವತಿ (bhadravati), ಆ. 11: ಮುಂಗಾರು ಮಳೆಗೆ (monsoon rain) ಮೈದುಂಬಿರುವ ಭದ್ರಾ ಜಲಾಶಯಕ್ಕೆ (bhadra dam) ಭಾನುವಾರ ಕರ್ನಾಟಕ ನೀರಾವತಿ ನಿಗಮ ನಿಯಮಿತದಿಂದ ಬಾಗಿನ ಅರ್ಪಣೆ ಹಾಗೂ ಗಂಗಾ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ವರ, ತರೀಕೆರೆ ಶಾಸಕ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಬಾಗಿನ ಅರ್ಪಣೆ ಕಾರ್ಯಕ್ರಮದ ನಂತರ ವೇದಿಕೆ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಸಂಘಸಂಸ್ಥೆಗಳ ಪ್ರಮುಖರು ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸಂತಸವಾಗಿದೆ : ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (laxmi hebbalkar) ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮೊದಲ ಬಾರಿಗೆ ಭದ್ರಾ ಜಲಾಶಯಕ್ಕೆ (bhadra reservoir) ಬಾಗಿನ ಅರ್ಪಿಸಿದ್ದೆನೆ. ತುಂಬ ಸಂತಸವಾಗಿದೆ ಎಂದರು.
ಪಶ್ಚಿಮಘಟ್ಟ (wetern ghats) ವ್ಯಾಪ್ತಿಯಲ್ಲಿ ಭಾರೀ ಮಳೆಯಾದ (heavy rainfaal) ಕಾರಣದಿಂದ ಜಲಾಶಯ, ನದಿ, ಕೆರೆ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಉತ್ತಮ ಮಳೆಯಿಂದ (rain) ಇಡೀ ರಾಜ್ಯ ಸಮೃದ್ಧವಾಗಿದೆ ಎಂದು ತಿಳಿಸಿದರು.