
ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ
ಶಿವಮೊಗ್ಗ, ಆ. 12: 2024 ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ, ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆಗಸ್ಟ್ 22 ರಿಂದ ಆಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ.
ಮಂಗಳೂರಿನ ಸೇನಾ ನೇಮಕಾತಿ ವಿಭಾಗದಿಂದ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳ ಇಮೇಲ್ ಮೂಲಕ ರವಾನಿಸಲಾಗಿದೆ.
ಈ ರ‍್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಮೀಸಲಾಗಿರುತ್ತದೆ ಎಂಬುದನ್ನು ನೇಮಕಾತಿ ನಿರ್ದೇಶಕರು, ಮಂಗಳೂರು ಇವರ ಕೋರಿಕೆಯ ಮೇರೆಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.