
ಶಿವಮೊಗ್ಗದಲ್ಲಿ ಮ್ಯಾರಥಾನ್ ಓಟ ಆಯೋಜನೆ
ಶಿವಮೊಗ್ಗ, ಆ. 14: ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ನೆಹರೂ ಕ್ರೀಡಾಂಗಣದಿಂದ ಇಂದು ಮ್ಯಾರಥಾನ್ ಓಟ ಏರ್ಪಡಿಸಲಾಗಿತ್ತು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್. ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳಾದ
ಶಶಿರೇಖಾ, ಆದಿಚುಂಚನಗಿರಿ ಶಾಖಾ ಮಠದ ಮುಖ್ಯಸ್ಥರು, ಸಿಬ್ಬಂದಿಗಳು, ಕ್ರೀಡಾಳುಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ “ನಶಾ ಮುಕ್ತ ಭಾರತ” ದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.