
ತೀರ್ಥಹಳ್ಳಿ : ಅಂದರ್ – ಬಾಹರ್ ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ!
ತೀರ್ಥಹಳ್ಳಿ (thirthahalli), ಆ. 14: ಅಂದರ್ – ಬಾಹರ್ ಇಸ್ಪೀಟ್ ಜೂಜು (ispit gambling) ಅಡ್ಡೆ ಮೇಲೆ ಪೊಲೀಸರು ದಾಳಿ (police raid) ನಡೆಸಿ, ನಾಲ್ವರನ್ನು ಬಂಧಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಆರಗ (araga) ಗ್ರಾಮದ ಹಿರೇಸರ ಪ್ಲಾಂಟೇಷನ್ ನಲ್ಲಿ ಆ. 12 ರಂದು ಜೂಜಾಟ (gambling) ನಡೆಯುತ್ತಿತ್ತು. ಈ ಕುರಿತಂತೆ ಪೊಲೀಸರಿಗೆ ಖಚಿತ ವರ್ತಮಾನ ಲಭಿಸಿದ್ದು, ಇದರ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ.
ದಾಳಿಯ ವೇಳೆ ನಾಲ್ವರು ಆರೋಪಿಗಳು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ಉಳಿದವರು ಪರಾರಿಯಾಗಿದ್ದಾರೆ. ಆರೋಪಿಗಳಿಂದ ಜೂಜಾಟಕ್ಕೆ ಬಳಸಿದ್ದ 12,270 ನಗದು ಮತ್ತು ಇಸ್ಪೀಟ್ ಎಲೆಗಳನ್ನು (ispit gambling cards) ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ವಿರುದ್ದ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ (thirthahalli police station), ಕರ್ನಾಟಕ ಪೊಲೀಸ್ ಕಾಯ್ದೆ ( karnataka police act ) ಕಲಂ 87 ರ ಅಡಿ ಪ್ರಕರಣ ದಾಖಲಿಸಲಾಗಿದೆ.
ಡಿವೈಎಸ್ಪಿ (dysp) ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಸಬ್ ಇನ್ಸ್’ಪೆಕ್ಟರ್ (psi) ಶಿವನಗೌಡ ಮತ್ತವರ ಸಿಬ್ಬಂದಿಗಳು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.