'Guarantee projects will continue' : CM Siddaramaiah ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ : ಸಿಎಂ ಸಿದ್ದರಾಮಯ್ಯ

‘ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು (bengaluru), ಆ.15: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು(guarantee schemes) ಜಾರಿಗೊಳಿಸುವ  ಮೂಲಕ ನಾಡಿನ  ಸಮಸ್ತಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ಯೋಜನೆಗಳು ಮುಂದುವರಿಯಲಿವೆ. ಸ್ಥಗಿತಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiha) ಹೇಳಿದರು.

ಇಲ್ಲಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕರ್ನಾಟಕ ಸರ್ಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆ (78 independence day 2024) ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ (Hoisting of the national flag) ನೆರವೇರಿಸಿ ,ಗೌರವ ರಕ್ಷೆ ಸ್ವೀಕರಿಸಿ ಅವರು ಮಾತನಾಡಿದರು,

ಗೃಹಲಕ್ಷ್ಮಿ (gruha laxmi scheme), ಶಕ್ತಿ (shakthi), ಗೃಹಜ್ಯೋತಿ (gruhagruha jyothi), ಅನ್ನಭಾಗ್ಯ (anna bhagya) ಮತ್ತು ಯುವನಿಧಿ (yuva nidhi) ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿಯುತ್ತಿರುವವರಿಗೆ ರಾಜ್ಯದಲ್ಲಿ ಆರ್ಥಿಕ ಪ್ರಗತಿ ಪ್ರಗತಿ ಸಾಧಿಸಿ ತೋರಿಸುವ ಮೂಲಕ ನಾವು ಉತ್ತರ ನೀಡಲಿದ್ದೇವೆ. ಹೊಸ ಅವಿಷ್ಕಾರಗಳನ್ನು ನಡೆಸಿ ಅವು ಫಲಾನುಭವಿಗಳಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಉದ್ಯುಕ್ತವಾಗಿದೆ ಎಂದರು.

ಶಕ್ತಿ ಯೋಜನೆಯಡಿ ಮಹಿಳೆಯರು 270 ಕೋಟಿ ಟ್ರಿಪ್ ಉಚಿತ ಪ್ರಯಾಣ ಸೌಲಭ್ಯ ಪಡೆದಿದ್ದಾರೆ. ಮಹಿಳೆಯರು 6541 ಕೋಟಿ ರೂ.ಗಳಷ್ಟು ಪ್ರಯಾಣ ವೆಚ್ಚ ಉಳಿತಾಯ ಮಾಡಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರದ ಅಸಹಕಾರದಿಂದಾಗಿ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡಲಾಗುತ್ತಿದೆ. ನಮ್ಮ ಸರ್ಕಾರದ ಜನಕಲ್ಯಾಣ ಯೋಜನೆಗಳು ಐದು ಗ್ಯಾರಂಟಿಗಳಿಗಷ್ಟೇ ಸೀಮಿತವಾಗಿಲ್ಲ,ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ನೀಡುವ ವಿವಿಧ ಯೋಜನೆಗಳಡಿ 13,027 ಕೋಟಿ ರೂ.ವೆಚ್ಚ ಮಾಡಲಾಗಿದೆ.

ಸ್ವಾತಂತ್ರ್ಯ ಹೋರಾಟದ ಮೆಲುಕು : ಎರಡು ಶತಮಾನಗಳ ಬ್ರಿಟಿಷರ ಕ್ರೂರ ದಾಸ್ಯದಿಂದ ಬಿಡುಗಡೆ ಹೊಂದಿ,ನಮ್ಮ ದೇಶ ಸ್ವಾತಂತ್ರ್ಯ ಪಡೆದ ಸುದಿನ ಇದಾಗಿದೆ.ನಮ್ಮ ದೇಶದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಕ್ಕಿಂತ ಹೆಚ್ಚು ಪ್ರಾಮಾಣಿಕವಾದ ಮತ್ತು ಅಹಿಂಸಾತ್ಮಕವಾದ ಮತ್ತೊಂದು ಚಳುವಳಿ ಚರಿತ್ರೆಯಲ್ಲಿ ಇಲ್ಲ.1924 ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ಚಾರಿತ್ರಿಕ ಬೆಳಗಾವಿ ಅಧಿವೇಶನ ನಡೆದು ಈಗ ನೂರು ವರ್ಷಗಳಾಗಿವೆ‌.ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು “ಬಹಿಷ್ಕೃತ ಹಿತಕಾರಿಣಿ ಸಭಾ” ಸ್ಥಾಪಿಸಿದ ಘಟನೆಗೂ ನೂರು ವರ್ಷಗಳು ತುಂಬಿದ ಸಂದರ್ಭದಲ್ಲಿ ಸ್ಮರಣೀಯ ಮತ್ತು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸುತ್ತಿದೆ ಎಂದು ಹೇಳಿದರು.

ಗಮನಸೆಳೆದ ಸಾಂಸ್ಕೃತಿಕ ಕಾರ್ಯಕ್ರಮಗಳು : ಸರ್ಕಾರದ ಐದು ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಕುರಿತು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 400 ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ಜನಪದ ಕಲಾ ಪ್ರದರ್ಶನ ಒಳಗೊಂಡ ಕಾರ್ಯಕ್ರಮ, ಯಲಹಂಕದ ಸರ್ಕಾರಿ ಪ್ರೌಢಶಾಲೆಯ 750 ವಿದ್ಯಾರ್ಥಿಗಳ ‘ಜಯ ಭಾರತಿ’,

ಬಿಬಿಎಂಪಿ ಪಿಳ್ಳಣ್ಣ ಗಾರ್ಡನ್ ಸಂಯುಕ್ತ ಪ.ಪೂ.ಕಾಲೇಜಿನ 700 ವಿದ್ಯಾರ್ಥಿಗಳಿಂದ “ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕ ದೇವಿ” ಕುರಿತ ಸಮೂಹ ನೃತ್ಯಗಳು,ರೂಪಕಗಳು,ಮರಾಠ ಲೈಟ್ ಇನ್‌ಫಂಟ್ರಿ ರೆಜಿಮೆಂಟ್ ಸೆಂಟರಿನ “ಮಲ್ಲಕಂಬ” ಪ್ರದರ್ಶನ, ಪ್ಯಾರಾಚೂಟ್ ರೆಜಿಮೆಂಟ್ ಟ್ರೇನಿಂಗ್ ಸೆಂಟರಿನ ಸಿಬ್ಬಂದಿಯ ಪ್ಯಾರಾ ಮೋಟರ್ ಪ್ರದರ್ಶನ , ಮಿಲಿಟರಿ ಪೊಲೀಸ್ ಸೆಂಟರ್ ಮತ್ತು ಶಾಲೆಯವರಿಂದ ಮೈ ನವಿರೇಳಿಸುವ ಮೋಟಾರು ಸೈಕಲ್‌ ಪ್ರದರ್ಶನಗಳು ನೆರೆದ ಜನರಲ್ಲಿ ಸಂಚಲನ ಉಂಟು ಮಾಡಿದವು.

Tributes to Freedom Heroes: District In-charge Minister S Madhu Bangarappa ಸ್ವಾತಂತ್ರ್ಯ ವೀರರು - ಯೋಧರಿಗೆ ನಮನಗಳು : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ Previous post ಸ್ವಾತಂತ್ರ್ಯ ವೀರರು – ಯೋಧರಿಗೆ ನಮನಗಳು : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ
An organization donated for the treatment of a cancer-stricken girl on the occasion of Independence Day ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಕ್ಯಾನ್ಸರ್ ಪೀಡಿತ ಬಾಲಕಿಯ ಚಿಕಿತ್ಸೆಗೆ ನೆರವಿನಹಸ್ತ Next post ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಕ್ಯಾನ್ಸರ್ ಪೀಡಿತ ಬಾಲಕಿಯ ಚಿಕಿತ್ಸೆಗೆ ನೆರವಿನಹಸ್ತ