ಜೋಗ-ಕಾರ್ಗಲ್

ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಮುಷ್ಕರ!

ಜೋಗ-ಕಾರ್ಗಲ್, ಮಾ. 5: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿಯ ಹೊರಗುತ್ತಿಗೆ ನೌಕರರು ಸೋಮವಾರದಿಂದ ಮುಷ್ಕರ ಆರಂಭಿಸಿದ್ದಾರೆ.

ನೀರು ಸರಬರಾಜು, ಸ್ವಚ್ಛತೆ, ಡಾಟಾ ಎಂಟ್ರಿ ಆಪರೇಟರ್, ವಾಹನ ಚಾಲಕರು ಸೇರಿದಂತೆ ವಿವಿಧ ವರ್ಗಗಳ ಹೊರಗುತ್ತಿಗೆ ನೌಕರರು ಜೋಗ – ಕಾರ್ಗಲ್ ಪಟ್ಟಣ ಪಂಚಾಯ್ತಿ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿದರು.

ಕೆಲಸ ಖಾಯಂಗೊಳಿಸಬೇಕು. ಕರ್ತವ್ಯಕ್ಕೆ ತಕ್ಕಂತೆ ವೇತನ ನಿಗದಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ನೌಕರರು ಆಗ್ರಹಿಸಿದ್ದಾರೆ. ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಮುಷ್ಕರ ಸ್ಥಗಿತಗೊಳಿಸುವುದಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಪೌರಕಾರ್ಮಿಕರ ಸಂಘಟನೆ ಅಧ್ಯಕ್ಷರಾದ ರವಿ, ಉಪಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಲೋಕೇಶ್, ಪುಷ್ಪಾ, ಪವಿತ್ರ ಮೊದಲಾದವರು ಉಪಸ್ಥಿತರಿದ್ದರು.

ಬೆಂಬಲ: ನೌಕರರ ಮುಷ್ಕರಕ್ಕೆ ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಹೆಚ್.ಎಲ್.ರಾಜಕುಮಾರ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ನೌಕರರ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ.

Previous post <strong>ರಕ್ತದಾನ ಮಾಡಿದ ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು</strong>
Next post ಡಿಸಿಸಿ ಬ್ಯಾಂಕ್ ನೇಮಕಾತಿ : ವೆಬ್‌ಸೈಟ್ ನಲ್ಲಿ ಫಲಿತಾಂಶ ಪ್ರಕಟ