ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ : ತಂದೆ ಸಾವು, ಮಗನಿಗೆ ಗಾಯ!

ಶಿವಮೊಗ್ಗ, ಮಾ. 7: ವೇಗವಾಗಿ ಆಗಮಿಸಿದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಮೊಪೆಡ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಬುಳ್ಳಾಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.

ಬುಳ್ಳಾಪುರ ಗ್ರಾಮದ ನಿವಾಸಿಯಾದ ಕರಿಬಸಪ್ಪ (65) ಮೃತಪಟ್ಟವರೆಂದು ಗುರುತಿಸಲಾಗಿದೆ. ಇವರ ಪುತ್ರ ಬಸವರಾಜ್ (35) ಅವರಿಗೆ ಗಾಯವಾಗಿದ್ದು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಅಜಾಗರೂಕ, ಮಿತಿಮೀರಿದ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಈ ಸಂಬಂಧ ಬಸ್ ಚಾಲಕನ ವಿರುದ್ದ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous post ಡಿಸಿಸಿ ಬ್ಯಾಂಕ್ ನೇಮಕಾತಿ : ವೆಬ್‌ಸೈಟ್ ನಲ್ಲಿ ಫಲಿತಾಂಶ ಪ್ರಕಟ
Next post ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಚಂದ್ರು ಗೆಡ್ಡೆ