ಮಾ.9 ರಂದು ವಿದ್ಯುತ್ ವ್ಯತ್ಯಯ ; ಸಹಕರಿಸಲು ಮನವಿ

ಶಿವಮೊಗ್ಗ, ಮಾ.7: ಶಿವಮೊಗ್ಗ ನಗರದ ಮೆಸ್ಕಾಂ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ಊರಗಡೂರು ಫೀಡರ್-07 ರಲ್ಲಿ ಮಾ.9 ರಂದು ಕಂಬ ಸ್ಥಳಾಂತರ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 

ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಿಂಗಪ್ಪ ಲೇಔಟ್, ಸೂಳೆಬೈಲು, ಊರಗಡೂರು, ಮದಾರಿಪಾಳ್ಯ, ಮಳಲಿಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಪ್ರದೇಶದ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Previous post ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಚಂದ್ರು ಗೆಡ್ಡೆ
Next post ಹೋಳಿ, ಶಬ್-ಎ-ಬರಾತ್ ಆಚರಣೆ : ಪೊಲೀಸರಿಂದ ಶಾಂತಿ ಸಮಿತಿ ಸಭೆ