ಸಿಮ್ಸ್ ನಲ್ಲಿ ಖಾಲಿಯಿರುವ ಹುದ್ದೆಗಳು : ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ, ಮಾ. 9: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಯ ಪ್ರಯೋಗಾಲಯದಲ್ಲಿ ಪ್ರಯೋಗ ಶಾಲಾ ತಂತ್ರಜ್ಞರು – 01 ಮತ್ತು ಡಾಟಾ ಎಂಟ್ರಿ ಆಪರೇಟರ್- 01 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆಗಾಗಿ  ಸಂಸ್ಥೆಯ ವೆಬ್‌ಸೈಟ್  www.sims-shimoga.com ರಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ದಿ: 18/03/2023 ರಂದು ಸಿಮ್ಸ್ ನಿರ್ದೇಶಕರ ಸಭಾ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಮತ್ತು ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  

Previous post ಹೋಳಿ ವೇಳೆ ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡು ಬೈಕ್ ಓಡಿಸುತ್ತಿದ್ದ ಚಾಲಕರಿಗೆ ಟ್ರಾಫಿಕ್ ಪೊಲೀಸರ ಶಾಕ್..!
Next post ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ