ಉದ್ಯೋಗಾವಕಾಶ : ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗ, ಮಾ. 10:  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.14 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Previous post ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
Next post <strong>ಕೊಲೆ ಪ್ರಕರಣ : ನಾಲ್ವರಿಗೆ ಜೀವಾವಧಿ ಶಿಕ್ಷೆ!</strong>