ಡಾ.ಬಿ.ಆರ್.ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿಯಿಂದ ಡಿಸಿಗೆ ಮನವಿ

ಶಿವಮೊಗ್ಗ, ಮಾ. 13: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಆದಿಜಾಂಬವ ರಾಜ್ಯ ಸಮಿತಿ ತಿಳಿಸಿದೆ.

ವಿಶೇಷ ಜಯಂತಿ ಆಚರಣೆಗೆ ಅನುಮತಿ ಕೋರಿ ಸೋಮವಾರ ಶಿವಮೊಗ್ಗ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಸಮಿತಿಯು ಮನವಿ ಪತ್ರ ಅರ್ಪಿಸಿತು.

ಜಿಲ್ಲೆಯ 7 ತಾಲೂಕು ಕೇಂದ್ರಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ವಿಶೇಷ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಸಕಲ ಪೂರ್ವಭಾವಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಂಘಟನೆಯು ತಿಳಿಸಿದೆ.

ಮನವಿ ಅರ್ಪಿಸುವ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಎನ್.ಪ್ರಕಾಶ್, ಗೌರವಾಧ್ಯಕ್ಷರಾದ ದೇವೇಂದ್ರಪ್ಪ, ಪ್ರಮುಖರಾದ ಕಲ್ಲಪ್ಪ, ಲಿಂಗರಾಜು, ಪ್ರದೀಪ್, ಶಿವಪ್ಪ, ಹಳದಪ್ಪ ಸೇರಿದಂತೆ ಮೊದಲಾದವರಿದ್ದರು.

doddapete police station, shimoga, Previous post <strong>ಗಾಂಜಾ ಮಾರಾಟ ಇಬ್ಬರು ಅರೆಸ್ಟ್!</strong>
Next post ಶಾಸಕ ಕೆ.ಬಿ.ಅಶೋಕನಾಯ್ಕ್ ವಿರುದ್ದ ಪ್ರತಿಭಟನಾ ಮೆರವಣಿಗೆ : ಜೆಡಿಎಸ್, ಕಾಂಗ್ರೆಸ್, ಎಎಪಿ ಪಕ್ಷದ ಮುಖಂಡರು ಭಾಗಿ