
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ
ಶಿವಮೊಗ್ಗ, ಡಿ. 30: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿಯೋಗ ಭೇಟಿ ನೀಡಿ ವೀಕ್ಷಿಸಿತು.
ಶಿವಮೊಗ್ಗದಲ್ಲಿ ಸುಸಜ್ಜಿತವಾದ ವಿಮಾನ ನಿಲ್ದಾಣ ಅಭಿವೃದ್ದಿಯಾಗಿರುವುದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಸಂಘ ತಿಳಿಸಿದೆ.
ಭೇಟಿಯ ವೇಳೆ ಸಂಘದ ಜಿಲ್ಲಾಧ್ಯಕ್ಷ ಎನ್.ಗೋಪಿನಾಥ್, ಪ್ರಮುಖರಾದ ಟಿ.ಆರ್.ಅಶ್ವತ್ಥ ನಾರಾಯಣ ಶೆಟ್ಟಿ, ಡಿ.ಎಂ.ಶಂಕರಪ್ಪ, ಜಿ.ವಿಜಯಕುಮಾರ್, ಉದಯಕುಮಾರ್, ಪ್ರದೀಪ್ ಎಲಿ, ಮರಿಸ್ವಾಮಿ, ರಮೇಶ್ ಹೆಗಡೆ, ನಿಲೇಶ್ ಮೊದಲಾದವರಿದ್ದರು.