ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪರಿಗೆ ಡಿ.31 ರಂದು ಸನ್ಮಾನ

ಶಿವಮೊಗ್ಗ, ಡಿ. 31: ದೇಶದ ಹಿರಿಯ ಪತ್ರಕತ್ರ, ‘ಕ್ರಾಂತಿ ಭಗತ್’ ದಿನಪತ್ರಿಕೆ ಸಂಪಾದಕರಾದ ಕಾಮ್ರೇಡ್ ಎಂ.ಲಿಂಗಪ್ಪ ಅವರಿಗೆ ಡಿ. 31 ರಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ತಿಳಿಸಿದ್ದಾರೆ.
ಶಿವಮೊಗ್ಗ ನಗರದ ಮಥುರಾ ಪ್ಯಾರಡೈಸ್ ಹೋಟೆಲ್ ಸಭಾಂಗಣದಲ್ಲಿ ಬೆಳಿಗ್ಗೆ 11.45 ಕ್ಕೆ ಸಮಾರಂಭ ನಡೆಯಲಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಕಾಮ್ರೇಡ್ ಲಿಂಗಪ್ಪ ಅವರಿಗೆ ಸನ್ಮಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಆರ್.ಕೆ.ಸಿದ್ದರಾಮಣ್ಣವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್, ಮಾಜಿ ವಿಪ ಸದಸ್ಯ ಆರ್.ಪ್ರಸನ್ನಕುಮಾರ್, ಹಿರಿಯ ಸಮಾಜವಾದಿ ಪಿ.ಪುಟ್ಟಯ್ಯ ಅವರು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದ್ದಾರೆ.
ಕಾಮ್ರೇಡ್ ಎಂ.ಲಿಂಗಪ್ಪ ಅವರು ದೇಶ, ರಾಜ್ಯದ ಹಿರಿಯ ಪತ್ರಕರ್ತರಾಗಿದ್ದಾರೆ. 98 ವರ್ಷ ಪೂರೈಸಿರುವ ಅವರು ಈಗಲೂ ಸಕ್ರಿಯ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಾಂತಿ ಭಗತ್ ಪತ್ರಿಕೆ ಸಂಪಾದಕರಾಗಿದ್ದಾರೆ. ಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸಿದ್ದಾರೆ. ನೊಂದವರಿಗೆ ನ್ಯಾಯ ಕೊಡಿಸಿದ್ದಾರೆ. ನೇರ, ನಿರ್ಭೀಡ ವ್ಯಕ್ತಿತ್ವದ ಮೂಲಕ ಗಮನ ಸೆಳೆದಿದ್ದಾರೆ ಎಂದು ಕಲ್ಲೂರು ಮೇಘರಾಜ್ ಅವರು ತಿಳಿಸಿದ್ದಾರೆ.

Previous post ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ
Next post ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪರಿಗೆ ನಾಗರೀಕರಿಂದ ಅದ್ಧೂರಿ ಸನ್ಮಾನ!