Shivamoggapolice

ವಿವಿಧ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ : ತನಿಖೆ ನಡೆಸಿದ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳಿಗೆ ಎಸ್ಪಿ ಸನ್ಮಾನ

ಶಿವಮೊಗ್ಗ, ಮಾ. 16: ವಿವಿಧ ಅಪರಾಧ ಪ್ರಕರಣಗಳ ಸಮರ್ಪಕ ತನಿಖೆ ನಡೆಸುವ ಮೂಲಕ, ನ್ಯಾಯಾಲಯದ ವಿಚಾರಣೆಯಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡಿದ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿ, ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ.

2017 ನೇ ಸಾಲಿನಲ್ಲಿ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ತನಿಖೆಯಲ್ಲಿದ್ದ ಸಿ.ಹೆಚ್.ಸಿ. ಟೀಕಪ್ಪ, ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದ ಕೊಲೆ ಪ್ರಕರಣದ ತನಿಖೆಯಲ್ಲಿದ್ದ ಎ.ಎಸ್.ಐ. ಕರಿಸಬಸಪ್ಪ,

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣದ ತನಿಖೆಯಲ್ಲಿದ್ದ ಸಿ.ಹೆಚ್.ಸಿ. ರಾಜಶೇಖರ್ ಶೆಟ್ಟಿಗಾರ್, 2019 ರಲ್ಲಿ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಎನ್.ಡಿ.ಪಿ.ಎಸ್. ಕಾಯ್ದೆ ಪ್ರಕರಣದ ತನಿಖೆಯಲ್ಲಿದ್ದ ಸಿಪಿಸಿ ಪ್ರವೀಣ್,

ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದ್ದ ಕೊಲೆ ಪ್ರಕರಣದ ತನಿಖೆಯಲ್ಲಿದ್ದ ಎ.ಎಸ್.ಐ. ಚಂದ್ರಪ್ಪ ಹಾಗೂ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಎನ್.ಡಿ.ಪಿ.ಎಸ್. ಕಾಯ್ದೆಯ ತನಿಖೆಯಲ್ಲಿದ್ದ ಪಿ.ಎಸ್.ಐ. ಮೋಹ ಜಿ ಅವರಿಗೆ ಸನ್ಮಾನಿಸಿ – ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಗಿದೆ.

ಅಧಿಕಾರಿ-ಸಿಬ್ಬಂದಿಗಳ ದಕ್ಷ ಕಾರ್ಯನಿರ್ವಹಣೆಗೆ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಮುಕ್ತಕಂಠದ ಶ್ಲಾಘನೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಇನ್ಸ್’ಪೆಕ್ಟರ್ ಸತೀಶ್ ಮೊದಲಾದವರು ಉಪಸ್ಥಿತರಿದ್ದರು.

Previous post ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಆರೋಪಿಗಳಿಬ್ಬರ ಮೇಲೆ ದಾಳಿ : ಓರ್ವ ಸಾವು – ಮತ್ತೋರ್ವನ ಸ್ಥಿತಿ ಗಂಭೀರ..!
Next post ಮಾ.17 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ!