ಮಾ.17 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ!

ಶಿವಮೊಗ್ಗ, ಮಾ. 16: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಮಾ.17 ರಂದು ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುಗಣಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲೂಕಿನ ಸಾರ್ವಜನಿಕರು ಆಗಮಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದವತಿಯಿಂದ 125 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಆದ್ದರಿಂದ ಮಾ. 17 ರಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿರುತ್ತಾರೆ.

Shivamoggapolice Previous post ವಿವಿಧ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ : ತನಿಖೆ ನಡೆಸಿದ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳಿಗೆ ಎಸ್ಪಿ ಸನ್ಮಾನ
Next post ಅಪ್ಪು ಹುಟ್ಟು ಹಬ್ಬದಂದು ಅನ್ನ ಸಂತರ್ಪಣೆ ಕಾರ್ಯಕ್ರಮ