shimoga | ಶಿವಮೊಗ್ಗ ತಾಲೂಕಿನ ವಿವಿಧೆಡೆ ಡಿ. 20 ರಂದು ವಿದ್ಯುತ್ ವ್ಯತ್ಯಯ!

shimoga | Which areas of Shimoga taluk will not have electricity on February 15? shimoga | ಶಿವಮೊಗ್ಗ ತಾಲೂಕಿನ ಯಾವೆಲ್ಲ ಪ್ರದೇಶಗಳಲ್ಲಿ ಫೆ. 15 ರಂದು ವಿದ್ಯುತ್ ಇರಲ್ಲ?

ಶಿವಮೊಗ್ಗ (shivamogga), ಡಿ. 18: ಶಿವಮೊಗ್ಗ ತಾಲೂಕಿನ ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರು, ಎಫ್-4 ಸಂತೇಕಡೂರು ಎಫ್-8 ಗಣಿದಾಳು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ

ಈ ಕೆಳಕಂಡ ಗ್ರಾಮಗಳಲ್ಲಿ ಡಿ. 20 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು,

ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

#shimogapowercutnews, #powercut, #poweroutage, shimoga city power cut news update, #mescom, #mescomnews,

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →