ಶಿವಮೊಗ್ಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನೇರ ಸಂದರ್ಶನ
ಶಿವಮೊಗ್ಗ, ಜ. 02 : ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಜ. 11 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ ಮತ್ತು ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ನೇರ ಸಂದರ್ಶನವು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ಜ.11 ರ ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ.
ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್‌ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700/- ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ಎನ್‌ಇಟಿ)ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-200872 ಹಾಗೂ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ನ್ನು ಸಂಪರ್ಕಿಸುವಂತೆ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shimoga, J. 02 : In connection with the recruitment of vacant Assistant Professor posts in various departments in Veterinary Medical College, Shimoga, J. Direct interview arranged on 11th.
For more information contact the phone number 08182-200872 and the university website www.kvafsu.edu.in, the Dean of Veterinary College said in the announcement.
