
shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ – ಜ. 4 ರಂದು ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತ!
ಶಿವಮೊಗ್ಗ (shivamogga), ಜ. 3: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಜನವರಿ 4 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ, ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಮಾಹಿತಿ ನೀಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಎಂಸಿಎಫ್-1, ಎಂಸಿಎಫ್-3 ಎಂಸಿಎಫ್-4, ಎಂಸಿಎಫ್-14 ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ಮತ್ತು ಎಂಸಿಎಫ್-27 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನೆಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.
ವಿವರ : ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ,
ಮೆ. ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕೊಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ,
ಕೆಎಂಎಫ್ ಡೈರಿ ಹಾಗೂ ಸುತ್ತಮುತ್ತನಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shimoga, Janauary 3: Mescom has informed that due to the road widening work on January 4 from 9 am to 6 pm, there will be power interruption in the rural subdivision of Machenahalli 110/11 KV power distribution station.
Machenahalli, Bidher, Nidige, Othighatta, Siddragudi, Harekatte, Sogane, Achari Camp, Hosur Reddycamp, Dummalli, Sugar Colony and Jayantigram, Honnavile,
Me Ramamurthy Minerals, District Central Jail, Koonix IT Park, Malnad Hospital, KSRP Colony, Navule Basavapura, Shettyhalli, Malenahalli, Gudrakoppa,
There will be disruption in power supply in KMF Dairy and surrounding villages. Assistant Executive Engineer, Rural Division, Maintenance and Maintenance of Mescom has said in a release that the public should cooperate.