
shimoga | ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ (shivamogga), ಜ. 14: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ನಾರಾಯಣ ಗುರು, ಇಂದಿರಾ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2025-26ನೇ ಸಾಲಿನಲ್ಲಿ 5 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಸದರಿ ವಸತಿ ಶಾಲೆಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ.
ಆಸಕ್ತ ವಿದ್ಯಾರ್ಥಿಗಳು ಆಯಾ ತಾಲೂಕಿನ ವಸತಿ ಶಾಲೆಗಳ ಮೂಲಕ ಜನವರಿ 25 ರೊಳಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಎಸ್ಸಿ – ಎಸ್ಟಿ ಹಾಗೂ ಹಿಂ.ವ. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆದಾಯವು 2.50 ಲಕ್ಷ ರೂ., ಮತ್ತು ಹಿಂದುಳಿದ ವರ್ಗ 2 ಎ ,2 ಬಿ, 3 ಎ ಮತ್ತು 3 ಬಿ ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆದಾಯವು 1ಲಕ್ಷ ರೂ.ಗಳ ಮಿತಿಯೊಳಗಿರಬೇಕು.
ಪ್ರವೇಶ ಪರೀಕ್ಷೆಯು ಫೆಬ್ರವರಿ 15 ರಂದು ನಡೆಯಲಿದ್ದು, ಪ್ರವೇಶ ಪತ್ರಗಳನ್ನು ಫೆಬ್ರವರಿ 6 ರಿಂದ ವೆಬ್‌ಸೈಟ್‌ಗಳಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-249241/080-23460460 ಅಥವಾ ಆಯಾ ತಾಲೂಕಿನ ಹತ್ತಿರದ ವಸತಿ ಶಾಲೆ ಅಥವಾ http://kreis.kar.nic.in, http://kea.kar.nic.in ವೆಬ್‌ಸೈಟ್‌ಗಳ ಮಾಹಿತಿ ಪುಸ್ತಕ-2025ನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Morarji Desai, Kittur Rani Chennamma, Atal Bihari Vajpayee, Narayan Guru, Indira Gandhi and Dr. B.R. Ambedkar Residential Schools invited online application for Class 6 Entrance Test from interested SC-ST, General, backward community students studying Class 5 in 2025-26.
The said residential schools are functioning under the District Social Welfare Department, Scheduled Castes Welfare Department and Backward Classes Welfare Department.
For more information 08182-249241/080-23460460 or the nearest residential school of the respective taluk or http://kreis.kar.nic.in, http://kea.kar.nic.in websites to contact Information Book-2025 by Deputy Director of District Social Welfare Department in a notification. informed.