bhadravati | Bhadravati: One killed in riot, four injured - attempt to set fire to house bhadravati | ಭದ್ರಾವತಿ : ಗಲಾಟೆಯಲ್ಲಿ ಓರ್ವನ ಹತ್ಯೆ, ನಾಲ್ವರಿಗೆ ಗಾಯ – ಮನೆಗೆ ಬೆಂಕಿ ಹಚ್ಚಲು ಯತ್ನ!

bhadravati | ಭದ್ರಾವತಿ : ಗಲಾಟೆಯಲ್ಲಿ ಓರ್ವನ ಕೊಲೆ, ನಾಲ್ವರಿಗೆ ಗಾಯ – ಮನೆಗೆ ಬೆಂಕಿ ಹಚ್ಚಲು ಯತ್ನ!

ಭದ್ರಾವತಿ (bhadravathi), ಜ. 23: ಜಮೀನಿನ ಟ್ರಾನ್ಸ್’ಫಾರ್ಮಾರ್ ವಿಚಾರದಲ್ಲಿ ನೆರೆಹೊರೆ ಜಮೀನಿನವರ ನಡುವೆ ನಡೆದ ಗಲಾಟೆಯು ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಮ್ಮೆದೊಡ್ಡಿ ಗ್ರಾಮದಲ್ಲಿ ಜ. 22 ರ ಸಂಜೆ ನಡೆದಿದೆ.

ದೊಡ್ಡೇರಿ ಗ್ರಾಮದ ನಿವಾಸಿ ಶಾಂತಕುಮಾರ (35) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆರೋಪಿ ಲೇಪಾಕ್ಷಿ (40), ಅತೀಶ್, ಅಭಿಲಾಷ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಇವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಇಬ್ಬರಿಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 10 ಜನರ ವಿರುದ್ದ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ನಾಗರಾಜ್, ಗ್ರಾಮಾಂತರ ಠಾಣೆ ಇನ್ಸ್’ಪೆಕ್ಟರ್ ಜಗದೀಶ್ ಹಂಚಿನಾಳ್, ಪೇಪರ್ ಟೌನ್ ಠಾಣೆ ಇನ್ಸ್’ಪೆಕ್ಟರ್ ನಾಗಮ್ಮ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರಣವೇನು? : ಕೊಲೆಗೀಡಾದ ಶಾಂತಕುಮಾರ್ ಹಾಗೂ ಆರೋಪಿ ಲೇಪಾಕ್ಷಿ ಕುಟುಂಬಗಳ ಜಮೀನು ಅಕ್ಕಪಕ್ಕದಲ್ಲಿವೆ. ಶಾಂತಕುಮಾರ್ ಅವರ ಜಮೀನಿನಲ್ಲಿ ಟ್ರಾನ್ಸ್’ಫಾರ್ಮಾರ್ ಇದ್ದು, ಸದರಿ ಟ್ರಾನ್ಸ್’ಫಾರ್ಮಾರ್ ಮೂಲಕ ಲೇಪಾಕ್ಷಿ ಕುಟುಂಬದ ಜಮೀನಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

ದುರಸ್ತಿಗೀಡಾಗಿದ್ದ ಟ್ರಾನ್ಸ್’ಫಾರ್ಮಾರ್ ವಿಚಾರದಲ್ಲಿ ಸಂಜೆ ಜಮೀನಿನಲ್ಲಿಯೇ ಗಲಾಟೆಯಾಗಿದ್ದು, ಕೈ ಕೈ ಮಿಲಾವಣೆಯಾಗಿದೆ. ತದನಂತರ ಎಮ್ಮೆದೊಡ್ಡಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆ ಸಮೀಪ ಎರಡೂ ಗುಂಪುಗಳ ನಡುವೆ ಮಾರಾಮಾರಿಯಾಗಿದೆ.

ಇದು ವಿಕೋಪಕ್ಕೆ ತಿರುಗಿ ಮಚ್ಚಿನಿಂದ ಶಾಂತಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡ ಶಾಂತಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ ಎನ್ನಲಾಗಿದೆ.

ತದನಂತರ ಲೇಪಾಕ್ಷಿ ಮನೆಗೆ ಬೆಂಕಿ ಹಚ್ಚಲು ಯತ್ನಿಸಲಾಗಿದೆ. ಮನೆಗೆ ಹೊತ್ತಿದ್ದ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಎರಡು ಬೈಕ್ ಗಳನ್ನು ಜಖಂಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಬಿಗಿ ಪಹರೆ : ಘಟನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಪಹರೆ ಹಾಕಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.

Bhadravati, January 23: A fight between neighboring farmers over the issue of land trans;farmer turned into a disaster and ended in the murder of one person, in Emmedoddi village under Bhadravati rural police station. It happened on the evening of 22nd.

Two separate complaints have been registered against 10 people at the rural police station in connection with the incident. Police are continuing to investigate.

SP GK Mithun Kumar, ASP Anil Kumar Bhoomareddy, DYSP Nagaraj, Rural Police Station Inspector Jagdish Hanchinal, Paper Town Police Station Inspector Nagamma have visited and inspected the incident site.

What did the Governor say at the Kuvempu University convocation ceremony? shimoga | ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ರಾಜ್ಯಪಾಲರು ಹೇಳಿದ್ದೇನು? Previous post shimoga | ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ರಾಜ್ಯಪಾಲರು ಹೇಳಿದ್ದೇನು?
shimoga | Laptop news for Shimoga Taluk College students is false: Social Welfare Department clarifies! shimoga | ಶಿವಮೊಗ್ಗ ತಾಲೂಕು ಕಾಲೇಜ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಸುದ್ದಿ ಸುಳ್ಳು : ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ! Next post shimoga | ಶಿವಮೊಗ್ಗ ತಾಲೂಕು ಕಾಲೇಜ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಸುದ್ದಿ ಸುಳ್ಳು : ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ!