ಶಿವಮೊಗ್ಗ (shivamogga), ಫೆ. 10: ಕಳೆದ ತಿಂಗಳು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತರಾಗಿದ್ದ 6 ನಕ್ಸಲೀಯರಲ್ಲಿ, ಇಬ್ಬರನ್ನು ಬಾಡಿ ವಾರಂಟ್ ಮೂಲಕ ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮುಂಡಗಾರು ಲತಾ ಹಾಗೂ ವನಜಾಕ್ಷಿ ಬಾಳೆಹೊಳೆ ಎಂಬುವರೆ, ಪೊಲೀಸರು ವಶಕ್ಕೆ ಪಡೆದ ನಕ್ಸಲೀಯರು ಎಂದು ಗುರುತಿಸಲಾಗಿದೆ. ಇವರನ್ನು ಬೆಂಗಳೂರಿನಿಂದ ಕರೆತರಲಾಗುತ್ತಿದೆ ಎನ್ನಲಾಗಿದೆ.
ಈ ಹಿಂದೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 2 ಹಾಗೂ ಹೊಸನಗರ ಠಾಣೆಯಲ್ಲಿ ದಾಖಲಾಗಿದ್ದ 1 ಪ್ರಕರಣಗಳಿಗೆ ಸಂಬಂಧಿಸಿದಂತೆ, ಈ ಇಬ್ಬರು ನಕ್ಸಲೀಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆನ್ನಲಾಗಿದೆ.
ಫೆ. 10 ರ ಮಧ್ಯಾಹ್ನ ತೀರ್ಥಹಳ್ಳಿ ನ್ಯಾಯಾಲಯಕ್ಕೆ ನಕ್ಸಲೀಯರನ್ನು ಪೊಲೀಸರು ಹಾಜರುಪಡಿಸುವ ಸಾಧ್ಯತೆಯಿದೆ. ಮಂಗಳವಾರ ಮತ್ತೊಂದು ಪ್ರಕರಣದಲ್ಲಿ ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಗೂ ಬುಧವಾರ ಹೊಸನಗರ ಕೋರ್ಟ್’ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
Shimoga, Feb 10: Of the 6 Naxalites who surrendered in the presence of CM Siddaramaiah last month, the Shimoga police have taken into custody two through body warrant.

