bhadravati | ಭದ್ರಾವತಿ : ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ – ಪೊಲೀಸರಿಂದ ಮೂವರು ಆರೋಪಿಗಳ ಬಂಧನ!
ಭದ್ರಾವತಿ (bhadravati), ಫೆ. 11: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಜ್ಯೋತಿ ಅವರಿಗೆ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಮಾವಿನಕಟ್ಟೆಯ ರವಿ (30), ಹಾಸನ ಜಿಲ್ಲೆ ಅರಕಲಗೂಡು ನಿವಾಸಿ ವರುಣ್ (34) ಹಾಗೂ ಭದ್ರಾವತಿ ತಾಲೂಕು ಸುರೇಂದ್ರಗೌಡ ಕ್ಯಾಂಪ್ ನಿವಾಸಿ ಅಜಯ್ (28) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ಫೆ. 11 ರಂದು ಅಧಿಕಾರಿ ಜ್ಯೋತಿ ಅವರು ಭದ್ರಾವತಿ ಡಿವೈಎಸ್ಪಿ ಅವರಿಗೆ ದೂರು ನೀಡಿದ್ದರು. ಇದರ ಆಧಾರದ ಮೇಲೆ ಹಳೇನಗರ ಪೊಲೀಸ್ ಠಾಣೆಯಲ್ಲಿ ಆರು ಜನರ ವಿರುದ್ದ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಭಾರೀ ಸದ್ದು : ಫೆ. 9 ರಂದು ರಾತ್ರಿ ಭದ್ರಾವತಿ ಪಟ್ಟಣದ ಸಿಗೇಬಾಗಿಯ ಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದ್ದ ದೂರಿನ ಮೇರೆಗೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಜ್ಯೋತಿ ಹಾಗೂ ಇತರರು ದಾಳಿ ನಡೆಸಿದ್ದರು.
ಈ ವೇಳೆ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿತ್ತು. ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದ್ದ ಆರೋಪ ಕೇಳಿಬಂದಿತ್ತು. ಮೊಬೈಲ್ ಫೋನ್ ನಲ್ಲಿ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ವೀಡಿಯೋ ವೈರಲ್ ಆಗಿತ್ತು. ರಾಜ್ಯಾದ್ಯಂತ ಸದ್ದು ಮಾಡಿತ್ತು.
Bhadravati, Feb 11: Bhadravati police have arrested three accused in connection with the case of illegal sand mining and threatening and verbally abusing Mines and Geosciences Department officer Jyoti.
On the night of February 9, following a complaint of illegal sand mining in the Bhadra river at Sigebagi in Bhadravati town, Mines and Earth Sciences Department officer Jyoti and others raided the area. This time his duty was interrupted. It was alleged that he was abused by unspoken words. A video in which a female officer was abused with unspoken words on a mobile phone went viral. There was noise across the state.
