bengaluru | Farmer leader Kuruburu Shanthakumar who was injured in the accident was taken to Bangalore in an air ambulance bengaluru | ಅಪಘಾತದಲ್ಲಿ ಗಾಯಗೊಂಡಿದ್ದ ರೈತ ನಾಯಕ ಕುರುಬೂರು ಶಾಂತಕುಮಾರ್ ಏರ್ ಆಂಬುಲೆನ್ಸ್ ನಲ್ಲಿ ಬೆಂಗಳೂರಿಗೆ

bengaluru | ಅಪಘಾತದಲ್ಲಿ ಗಾಯಗೊಂಡಿದ್ದ ರೈತ ನಾಯಕ ಕುರುಬೂರು ಶಾಂತಕುಮಾರ್ ಏರ್ ಆಂಬುಲೆನ್ಸ್ ನಲ್ಲಿ ಬೆಂಗಳೂರಿಗೆ

ಬೆಂಗಳೂರು (bangalore) ಫೆ. 16: ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ, ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಫೆ. 16 ರಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌

ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ.

ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ, ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು

ಈ ಮಧ್ಯೆ ದೆಹಲಿ ನಿವಾಸಿ ಆಯುಕ್ತರಾದ ಇಂಕೊಂಗ್ಲ ಜಮೀರ್ ಅವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಟಿಯಾಲದ ಆಸ್ಪತ್ರೆ ವೈದ್ಯರ ಜೊತೆ ಸತತ ಸಂಪರ್ಕದಲ್ಲಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ನಿನ್ನೆ ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದರು. ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.

Bengaluru (bangalore) Feb 16: Farmer leader Kuruburu Shanthakumar, who was seriously injured in an accident near Patiala in Punjab, was brought to Bangalore by air ambulance on Feb 16.

Shanthakumar has been admitted to Manipal Hospital in Bangalore for treatment. Chief Minister Siddaramaiah wished Shanthakumar a speedy recovery.

Shimoga Palike | Municipality area revision: Speed in Tumkur - snail pace in Shivamogga! | Continued negligence of public representatives - officials..!! ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ತುಮಕೂರಲ್ಲಿ ವೇಗ - ಶಿವಮೊಗ್ಗದಲ್ಲಿ ಆಮೆವೇಗ! | ಮುಂದುವರಿದ ಜನಪ್ರತಿನಿಧಿಗಳು - ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ..!! Previous post shimoga | ರಾಜ್ಯದಲ್ಲಿ ಇ-ಖಾತಾ ವಿಳಂಬಕ್ಕೆ CM ಗರಂ : ಶಿವಮೊಗ್ಗ ಪಾಲಿಕೆಯಲ್ಲಿ ಪರಿಹಾರವಾಗಲಿದೆಯಾ ಗೊಂದಲ?
Shimoga: District highway is dangerous for school children – PWD traffic police to pay attention? shimoga : ಶಿವಮೊಗ್ಗ : ಶಾಲಾ ಮಕ್ಕಳಿಗೆ ಅಪಾಯಕಾರಿ ಜಿಲ್ಲಾ ಹೆದ್ಧಾರಿ – ಗಮನಹರಿಸುವರೆ ಪಿಡಬ್ಲ್ಯೂಡಿ ಟ್ರಾಫಿಕ್ ಪೊಲೀಸರು? Next post shimoga | ಶಿವಮೊಗ್ಗ : ಶಾಲಾ ಮಕ್ಕಳಿಗೆ ಅಪಾಯಕಾರಿಯಾದ  ಹೆದ್ಧಾರಿಗಳು – ಗಮನಹರಿಸುವರೆ ಪಿಡಬ್ಲ್ಯೂಡಿ, ಟ್ರಾಫಿಕ್ ಪೊಲೀಸರು?