bengaluru | Bangalore | Grilahakshmi Annabhagya money release delayed: What did the CM say? bengaluru | ಬೆಂಗಳೂರು | ಗೃಹಲಕ್ಷ್ಮೀ ಅನ್ನಭಾಗ್ಯ ಹಣ ಬಿಡುಗಡೆ ವಿಳಂಬ : ಸಿಎಂ ಹೇಳಿದ್ದೇನು?

bengaluru | ಬೆಂಗಳೂರು | ಗೃಹಲಕ್ಷ್ಮೀ, ಅನ್ನಭಾಗ್ಯ ಹಣ ಬಿಡುಗಡೆ ವಿಳಂಬ : ಸಿಎಂ ಹೇಳಿದ್ದೇನು?

ಬೆಂಗಳೂರು (bangalore), ಫೆ. 17: ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಗಳಡಿ ಫಲಾನುಭವಿಗಳಿಗೆ ಕೂಡಲೇ ಹಣ ಬಿಡುಗಡೆ ಮಾಡಲು ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಫೆ. 17 ರಂದು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆಯಡಿ ಕಳೆದ 5 ತಿಂಗಳಿನಿಂದ ಹಾಗೂ ಗೃಹಲಕ್ಷ್ಮೀ ಯೋಜನೆಯಡಿ 3 ತಿಂಗಳಿನಿಂದ ಫಲಾನುಭವಿಗಳಿಗೆ ಹಣ ಜಮಾ ಆಗಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾವತಿ ಮಾಡದಿದ್ದರೆ ಮಾಡುತ್ತೇವೆ . ಪಾವತಿಯಲ್ಲಿ ವಿಳಂಬವಾಗಿದ್ದರೆ ಪರಿಶೀಲಿಸಿ, ಕೂಡಲೇ ಬಿಡುಗಡೆ ಮಾಡಲಾಗುವುದು. ಹಣ ಬಿಡುಗಡೆ ವಿಳಂಬವಾಗಿರುವ ಬಗ್ಗೆ ತಮಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.

ಬಜೆಟ್ : ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ  ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು,  ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಹೇಳಿದ್ದಾರೆ.

ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ  ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದರು.

ರೈತರ ಹಿತ : ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಇಂದು ರೈತ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದು, ಅವರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸುವಾಗ  ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು. ಕರ್ನಾಟಕ ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಯಾವತ್ತೂ ರೈತರ ಪರವಾಗಿದ್ದು, ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಇರಲಿದೆ ಎಂದು ತಿಳಿಸಿದರು.

ಬೆಲೆಯೇರಿಕೆ ಹೆಚ್ಚಾಗಿರುವುದರಿಂದ ನಿರೀಕ್ಷೆಗಳು ಕೂಡ ಹೆಚ್ಚಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡೂ ಮಾಡುತ್ತವೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ಕುರಿತು ಹೆಚ್ಚಿನ ಒತ್ತು ನೀಡಬೇಕು.  ರಾಜ್ಯ ಸರ್ಕಾರ ಬೆಲೆಯೇರಿಕೆ ತಗ್ಗಿಸಲು  ಸಾಧ್ಯವಾದಷ್ಟೂ ಪ್ರಯತ್ನ ಮಾಡಲಿದೆ ಎಂದರು .

ಮೆಟ್ರೋ ದರ : ಮೆಟ್ರೋ ರೈಲಿನ ದರ ನಿಗದಿ  ಮಾಡುವುದು ಕೇಂದ್ರ ಸರ್ಕಾರ ನೇಮಕ ಮಾಡಿರುವ ಸಮಿತಿ. ಮೆಟ್ರೋ ಸ್ವಾಯತ್ತ ಸಂಸ್ಥೆಯಾದರೂ, ಸಮಿತಿಯಲ್ಲಿ ಇಬ್ಬರು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಇಬ್ಬರು ರಾಜ್ಯ ಸರ್ಕಾರದ ಪ್ರತಿನಿಧಿಗಳಿರುತ್ತಾರೆ. ಬೆಲೆ ನಿಗದಿ ಮಾಡಲು ರಾಜ್ಯ ಸರ್ಕಾರ  ಪ್ರಸ್ತಾವನೆ ನೀಡುತ್ತದೆ.  ಬೆಲೆ ನಿಗದಿ ಮಾಡುವುದು ಸಮಿತಿ. ಅಧ್ಯಕ್ಷರನ್ನು ನೇಮಕ ಮಾಡುವುದು ಕೇಂದ್ರ ಸರ್ಕಾರ. ಪ್ರಸ್ತುತ ತಮಿಳುನಾಡು ರಾಜ್ಯದ ನಿವೃತ್ತ ನ್ಯಾಯಾಧೀಶರು ಅಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದರು.

ಚುನಾವಣೆಗೆ ಸಿದ್ದ : ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳಿಗೆ ನಾವು ಸಿದ್ಧರಾಗಿದ್ದು, ಉಚ್ಛ ನ್ಯಾಯಾಲಯದ ಸೂಚನೆ ಮೇರೆಗೆ ಚುನಾವಣೆ ಮಾಡಲಾಗುವುದು  ಎಂದು ಇದೆ ವೇಳೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರದ ಪಾಲು ಬಂದಿಲ್ಲ : ಜಲ್ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳನ್ನು ನಮ್ಮ ವೇಗಕ್ಕೆ ಅನುಗುಣವಾಗಿ ಮಾಡುತ್ತಿಲ್ಲ. ಕೇಂದ್ರ ಸರ್ಕಾರದ ಪಾಲನ್ನು ಅವರು ಕೊಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಲಾಗಿತ್ತು ಎಂದರು.

ವರಿಷ್ಠರಿಗೆ ಬಿಟ್ಟಿದ್ದು : ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ  ಪ್ರತಿಕ್ರಿಯೆ ನೀಡುತ್ತಾ ಈ ಕುರಿತು ಪಕ್ಷದ ಹೈ ಕಮಾಂಡ್ ತೀರ್ಮಾನಿಸಲಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಸ್ಪಷ್ಟಪಡಿಸಿದ್ದಾರೆ.

Bengaluru, Feb 17: Chief Minister Siddaramaiah said that the beneficiaries under the Annabhagya and Grilahakshmi schemes will be instructed to release the money immediately.

He spoke to reporters on February 17 at Vidhansouda in Bangalore. The CM has responded to the question of the reporters that the money has not been deposited to the beneficiaries under the guarantee schemes such as Annabhagya Yojana for the last 5 months and under the Grilahakshmi Yojana for 3 months.

#annabhagya, #annabhagyascheme, #gruhalaxmischeme, #gruhalaxmi, #gruhalaxmi_scheme, #ಗ್ಯಾರಂಟಿ, #ಗ್ಯಾರಂಟಿಯೋಜನೆಗಳು, #ಅನ್ನಭಾಗ್ಯ, #ಗೃಹಲಕ್ಷ್ಮೀ,

Which trains will be affected? What is the Railway Department's announcement? ಯಾವೆಲ್ಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ? ರೈಲ್ವೆ ಇಲಾಖೆ ಪ್ರಕಟಣೆಯೇನು? Previous post shimoga | kumbh mela train | ಪ್ರಯಾಗ್’ರಾಜ್ ಕುಂಭಮೇಳಕ್ಕೆ ಶಿವಮೊಗ್ಗದಿಂದ ರೈಲು – ವೇಳಾಪಟ್ಟಿ, ನಿಲ್ದಾಣಗಳ ಕಂಪ್ಲೀಟ್ ಡೀಟೈಲ್ಸ್…
shimoga | Shimoga: Job fair on February 24 - More than 50 reputed companies participated shimoga | ಶಿವಮೊಗ್ಗ : ಫೆ. 24 ರಂದು ಉದ್ಯೋಗ ಮೇಳ - 50 ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳು ಭಾಗಿ Next post shimoga | ಶಿವಮೊಗ್ಗ : ಫೆ. 24 ರಂದು ಉದ್ಯೋಗ ಮೇಳ – 50 ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳು ಭಾಗಿ