
shikaripura | ಶಿಕಾರಿಪುರ : ಹುಲಿ ಮೃತದೇಹ ಪತ್ತೆ – ತನಿಖೆಗೆ ಅರಣ್ಯ ಇಲಾಖೆ ಸಚಿವರ ಸೂಚನೆ!
ಶಿವಮೊಗ್ಗ (shimoga), ಫೆ.18: ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ ಶಿಕಾರಿಪುರ ತಾಲೂಕಿನ ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ, ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.
ಹುಲಿಯ ಸಾವಿನ ಕುರಿತಂತೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಫೆ. 19 ರಂದು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಸಚಿವರು, ಹುಲಿಗೆ ಗುಂಡು (ಪೆಲೆಟ್ಸ್) ಹೊಡೆದ ಗಾಯವೂ ಇರುವುದಾಗಿ ಮಾಧ್ಯಮಗಳಲ್ಲಿ ಸಚಿತ್ರ ವರದಿಗಳು ಪ್ರಕಟವಾಗಿದೆ. ಈ ಬಗ್ಗೆ ತನಿಖೆ ನಡೆಸಿ 10 ದಿನಗಳ ಒಳಗಾಗಿ ವಾಸ್ತವ ವರದಿ ಸಲ್ಲಿಸಲು ತಿಳಿಸಿದ್ದಾರೆ.
ಹುಲಿಯ ಮೃತ ದೇಹ ಪತ್ತೆಯಾಗಿರುವ ಪ್ರದೇಶದಲ್ಲಿ, ಯಾವತ್ತೂ ಹುಲಿಯ ದರ್ಶನವೇ ಆಗಿಲ್ಲ. ಹೀಗಾಗಿ ಬೇರೆ ಕಡೆ ಹುಲಿ ಕೊಂದು ಇಲ್ಲಿ ಹಾಕಿರಬಹುದು ಎಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆಯೂ ತನಿಖೆ ನಡೆಸಲು ಸಚಿವರು ಸೂಚಿಸಿದ್ದಾರೆ.
Shimoga, Feb 18: The dead body of a 7-8 year old male tiger was found in the back water of Ambligola reservoir in Shikaripura taluk of Sagar Forest division of Shimoga district yesterday evening.
Forest, Biology and Environment Minister Ishwar B Khandre has on February 19 instructed the senior officials of the forest department to conduct a thorough investigation and submit a report on the death of the tiger.