
shimoga | ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ ಅನದಿಕೃತ ಬಡಾವಣೆಗಳ ನಿವೇಶನ, ಕಟ್ಟಡಗಳಿಗೆ ಸಿಗಲಿದೆ ಬಿ – ಖಾತಾ : ನಿಯಮಗಳೇನು?
ಶಿವಮೊಗ್ಗ (shivamogga), ಫೆ. 20: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 10/09/2024 ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ / ಕಟ್ಟಡಗಳಿಗೆ, ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಆಸ್ತಿ ಮಾಲೀಕರು ಪಾಲಿಕೆ ಕಚೇರಿ ಸಂಪರ್ಕಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಈ ಕುರಿತಂತೆ ಫೆ. 20 ರಂದು ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಎ – ಖಾತೆ ಹಾಗೂ ಬಿ – ಖಾತೆ ಪಡೆಯಲು ಪಾಲಿಸಬೇಕಾದ ನಿಯಮಗಳ ಬಗ್ಗೆ ಅವರು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.
ಎ-ಖಾತಾ : ನಿವೇಶ – ಕಟ್ಟಡಗಳಿಗೆ ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರಗಳು / ದಾನ ಪತ್ರ / ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು / ಮಂಜೂರಾತಿ ಪತ್ರಗಳು,
ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
ಬಿ ಖಾತಾ : ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು / ದಾನ ಪತ್ರ / ವಿಭಾಗ ಪತ್ರಗಳು / ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ.
ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸಬೇಕು. ಈ ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shimoga, Feb 20: Provision has been made to issue B-account for plots/buildings constructed in unauthorized layouts under Shimoga Municipal Corporation till the end of 10/09/2024. Shimoga Municipal Corporation Commissioner said that the property owners should contact the corporation office.
palike commissionar has issued a press release on February 20 in this regard. He informed the public about the rules to be followed to get A-khata and B-khata.