anavatti | How to get A and B khata for immovable properties? What is Anavatti Town Panchayat Announcement? anavatti | ಸ್ಥಿರಾಸ್ತಿಗಳಿಗೆ ಎ - ಬಿ ಖಾತಾ ಪಡೆಯುವುದು ಹೇಗೆ? ಆನವಟ್ಟಿ ಪಟ್ಟಣ ಪಂಚಾಯ್ತಿ ಪ್ರಕಟಣೆಯೇನು?

anavatti | ಸ್ಥಿರಾಸ್ತಿಗಳಿಗೆ ಎ – ಬಿ ಖಾತಾ ಪಡೆಯುವುದು ಹೇಗೆ? ಆನವಟ್ಟಿ ಪಟ್ಟಣ ಪಂಚಾಯ್ತಿ ಪ್ರಕಟಣೆಯೇನು?

ಆನವಟ್ಟಿ (anavatti), ಫೆ. 27: ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ, ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಆಸ್ತಿ ಮಾಲೀಕರು ಪಟ್ಟಣ ಪಂಚಾಯಿತಿ ಕಚೇರಿ ಸಂಪರ್ಕಿಸುವಂತೆ ಆನವಟ್ಟಿ ಪಟ್ಟಣ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ಮೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ.

ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024 ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು,

ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸಬೇಕು. ಪ್ರಕಟಣೆ ಹೊರಡಿಸಿದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆನವಟ್ಟಿ ಪಟ್ಟಣ ಪಂಚಾಯ್ತಿ ಕಚೇರಿಯ ಸಹಾಯವಾಣಿ ಸಂ.: 08184-200899ನ್ನು ಅಥವಾ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.

Anavatti, Feb 27: Anavatti Town Panchayat has been allowed to issue B-account for plots/buildings constructed in unauthorized slums till the end of 10/09/2024. Anavatti Town Panchayat said in a release that property owners should contact Town Panchayat office. For more information contact Anavatti Town Panchayat Office Helpline No.: 08184-200899 or contact the office in person.

shimoga | The son-in-law killed his father-in-law within 15 days of his release from jail! shimoga | ಜೈಲಿನಿಂದ ಹೊರಬಂದ 15 ದಿನದಲ್ಲಿಯೇ ಮಾವನನ್ನೇ ಕೊಲೆ ಮಾಡಿದ ಅಳಿಯ! Previous post shimoga | ಜೈಲಿನಿಂದ ಹೊರಬಂದ 15 ದಿನದಲ್ಲಿಯೇ ಮಾವನನ್ನೇ ಕೊಲೆ ಮಾಡಿದ ಅಳಿಯ!
shimoga | Lok Sabha Constituency Redistricting: Home Minister Amit Shah's statement is not credible - CM Siddaramaiah shimoga | ಲೋಕಸಭಾ ಕ್ಷೇತ್ರ ಮರುವಿಂಗಡಣೆ : ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ – ಸಿಎಂ ಸಿದ್ದರಾಮಯ್ಯ Next post bengaluru | ಲೋಕಸಭಾ ಕ್ಷೇತ್ರ ಮರುವಿಂಗಡಣೆ : ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ – ಸಿಎಂ ಸಿದ್ದರಾಮಯ್ಯ